ಜಿಲ್ಲೆಗಳು

ದೇಶದ ಬೆಳವಣಿಗೆ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಿ: ಎಚ್.ಡಿ.ಗಿರೀಶ್

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ್ದಾಗಿದ್ದು, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಹೇಳಿದರು.

ನಗರದ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ನಗರದ ರುಡ್ ಸೆಟ್ ಸಂಸ್ಥೆಯಲ್ಲಿ ನಡೆದ ಮತದಾನದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು. ಜಗತ್ತಿನಲ್ಲಿಯೇ ಅತಿದೊಡ್ಡ ಸಂವಿಧಾನ ಹೊಂದಿರುವ ಭಾರತ ದೇಶದಲ್ಲಿ ಚುನಾವಣೆ ವ್ಯವಸ್ಥೆಯು ದೇಶದ ಅಭಿವೃದ್ಧಿಗೆ ಬಹುಮುಖ್ಯವಾದ ಪಾತ್ರವಹಿಸುತ್ತದೆ. ಈ ಹಿನ್ನೆಲೆ ನೀವು ಮತದಾನ ಮಾಡಿ ಹಾಗೂ ನಿಮ್ಮ ಕುಟುಂಬದವರಿಗೂ ಮತದಾನ ಮಾಡಲು ಸಲಹೆ ನೀಡಿ ಎಂದು ಕರೆ ನೀಡಿದರು.

ಹೊಸದಾಗಿ ಮತದಾರ ಪಟ್ಟಿಗೆ ಹೆಸರು ಸೇರಿಸಲು ನಿಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ, ಅಗತ್ಯ ದಾಖಲಾತಿಗಳನ್ನು ನೀಡುವ ಮೂಲಕ ನಮೂನೆ-6 ರಲ್ಲಿ ಮತದಾರ ಪಟ್ಟಿಗೆ ನಿಮ್ಮ ಹೆಸರು ಸೇರ್ಪಡೆಗೊಳಿಸಿ. ಮತದಾನ ಗುರುತಿನ ಚೀಟಿ ಹೊಂದಿದ್ದರೂ ನಿಮ್ಮ ಹೆಸರನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ. ಹೆಸರು, ಮಾಹಿತಿ ತಪ್ಪಿದ್ದರೆ ಹಾಗೂ ವಿಳಾಸ ವರ್ಗಾವಣೆಯನ್ನು ಕೂಡಲೇ ಮಾಡಿಸಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು‌.

ಕಾರ್ಯಕ್ರಮದಲ್ಲಿ ಉಪ ತಹಸಿಲ್ದಾರ್ ಪುಟ್ಟಸ್ವಾಮಿಗೌಡ ಮಾತನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಜುಳಾ ಪಾಟೀಲ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು‌. ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಆನಂದನಾಯಕ, ಮೈಸೂರು ತಾಲ್ಲೂಕಿನ ಎಲ್‌.ಸಿ.ಸಿ ಡಿ.ಟಿ.ವೆಂಕಟೇಶ್, ಉಪನ್ಯಾಸಕರಾದ ಆರ್.ಪಾಲರಾಜು, ಲತಾಮಣಿ ಸೇರಿದಂತೆ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯ 94 ಹಳ್ಳಿಗಳಿಂದ ತರಬೇತಿಗೆ ಆಗಮಿಸಿದ್ದ ಮಹಿಳಾ ಶಿಬಿರಾರ್ಥಿಗಳು ಹಾಜರಿದ್ದರು.

andolanait

Recent Posts

ಮಾಜಿ ಶಾಸಕ ಸುರೇಶ್‌ ಗೌಡ ಕಾರು ಅಪಘಾತ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್‌ ಮಾಜಿ ಶಾಸಕ ಸುರೇಶ್‌ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿರುವ ಘಟನೆ…

26 mins ago

ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಝಳದ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

37 mins ago

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…

1 hour ago

ಮಹಿಳೆಯರ ಮುಂದೆ ಮೂತ್ರ ವಿಸರ್ಜಿಸಿದ ಶಿಕ್ಷಕ: ಪ್ರಶ್ನಿಸಿದ ವ್ಯಕ್ತಿಗೆ ಚಾಕು ಇರಿತ

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…

1 hour ago

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

4 hours ago

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…

4 hours ago