ಜಿಲ್ಲೆಗಳು

ಓದಿರೋದು ಒಂದು ಕೊಡುತ್ತಿದ್ದ ಚಿಕಿತ್ಸೆ ಮತ್ತೊಂದು! ನಕಲಿ ಅಲೋಪತಿ ವೈದ್ಯರಿದ್ದ ಮೂರು ಕ್ಲೀನಿಕ್ ಬಂದ್‌

ಹನೂರು: ತಾಲ್ಲೂಕಿನ ಜನರ ಜೀವದೊಟ್ಟಿಗೆ ಚೆಲ್ಲಾಟ ಆಡುತ್ತಿದ್ದ ನಕಲಿ ಅಲೋಪತಿ ವೈದ್ಯರಿಗೆ ಡಿಎಚ್ ಒ ಡಾ. ವಿಶ್ವೇಶ್ವರಯ್ಯ ಬಿಸಿ‌ ಮುಟ್ಟಿಸಿ ಕ್ಲೀನಿಕ್ ಗಳನ್ನು ಬಂದ್ ಮಾಡಿಸಿರುವ ಘಟನೆ ಕೌದಳ್ಳಿಯಲ್ಲಿ ನಡೆದಿದೆ.
ತಾಲೂಕಿನ ನಕಲಿ ಕ್ಲೀನಿಕ್ ಗಳ ಮೇಲೆ ಡಿಎಚ್ಒ ಡಾ.ವಿಶ್ವೇಶ್ವರಯ್ಯ ಹಾಗೂ ಪ್ರಭಾರ ಟಿಎಚ್ ಒ ಡಾ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕೌದಳ್ಳಿ ಗ್ರಾಮದಲ್ಲಿ ಇರುವ ಆದಮ್ ಕ್ಲೀನಿಕ್, ಜನತಾ ಕ್ಲೀನಿಕ್ ಹಾಗೂ ದೀಪಾ ಕ್ಲಿನಿಕ್ ಗಳಿಗೆ ನೋಟಿಸ್ ಜಾರಿ ಬಂದ್ ಮಾಡಿಸಿದ್ದಾರೆ‌.
ತಾಲೂಕಿನ ವಿವಿಧಡೆ ನಕಲಿ ಕ್ಲೀನಿಕ್ ಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ. ‌ಅಜ್ಜೀಪುರ, ರಾಮಾಪುರ ಮತ್ತು ಕೂಡ್ಲೂರು, ಹೂಗ್ಯಂ ಇನ್ನಿತರೆ ಇರುವ ಕ್ಕೀನಿಕ್ ಗಳನ್ನು ಗುರುವಾರ ಅಧಿಕಾರಿಗಳ‌ ತಂಡ ಪರಿಶೀಲನೆ ಮಾಡಲಿದ್ದಾರೆ. ಲೈಸೆನ್ಸ್ ಒಬ್ಬರದ್ದಾದರೇ ಚಿಕಿತ್ಸೆ ಕೊಡುವವರು ಮತ್ತೊಬ್ಬರು, ಆಯುಷ್ ವೈದ್ಯರು ಅಲೋಪತಿ ಚಿಕಿತ್ಸೆ ಕೊಡುತ್ತಿರುವುದು ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ.

andolanait

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

2 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

2 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

5 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

5 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

6 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

6 hours ago