ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ ಕ್ಲಿನಿಕ್ ಗಳಿಗೆ ಬೀಗ ಹಾಕಿದ್ದಾರೆ.
ಇದೆ ಸಂದರ್ಭದಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಡಿ ಎಚ್ ಓ ಡಾಕ್ಟರ್ ವಿಶ್ವೇಶ್ವರಯ್ಯ ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಮೊದಲ ಬಾರಿ ನೋಟೀಸ್ ಕೊಟ್ಟಿದ್ದೇವೆ ಆದರೇ ನೋಟಿಸ್ ಗೆ ಹೆದರದೆ ಮತ್ತೆ ಚಿಕಿತ್ಸೆ ನೀಡುತ್ತಿದ್ದರು ಎಂಬ ಮಾಹಿತಿ ಬಂದ ಮೇಲೆ ಇಂದು ನಕಲಿ ಕ್ಲಿನಿಕ್ ಗಳನ್ನು ಸೀಜ್ ಮಾಡಿದ್ದೇವೆ. ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಅಲ್ಲದೆ ನಮ್ಮ ಸಿ ಎಚ್ ಒ ಹಾಗೂ ಎ ಎನ್ಅ ಎಂ ಅವರನ್ನು ಇಲ್ಲೇ ಉಳಿದು ಸೇವೆ ನೀಡಬೇಕು ಎಂದು ಆದೇಶ ನೀಡಿದ್ದೇವೆ. ಇಲ್ಲಿ ಉಳಿಯಲು ವ್ಯವಸ್ಥೆ ಸಹ ಇದ್ದು ಆರೋಗ್ಯ ಸೇವೆ ಸಿಗಲಿದೆ ಎಂದರು.
ಉಪಕೇಂದ್ರಕ್ಕೆ ಭೇಟಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೇಂದ್ರಕ್ಕೆ ಭೇಟಿ ನೀಡಿ ಕೇಂದ್ರದ ಸಿಬ್ಬಂದಿಗಳಿಗೆ ಆರೋಗ್ಯ ಸೇವೆ ನೀಡಲು ಸೂಚನೆ ನೀಡಿದರು.
ಇದೆ ಸಂದರ್ಭದಲ್ಲಿ ತಾಲೂಕು ಪ್ರಭಾರ ಆರೋಗ್ಯಾಧಿಕಾರಿ ಡಾ. ಪ್ರಕಾಶ್, ವೈದ್ಯರಾದ ಡಾ. ಮನು, ಸಿ ಎಚ್ ಒ ಸಿದ್ದೇಶ್ ಹಾಗೂ ಆಶಾ ಕಾರ್ಯಕರ್ತರು ಇದ್ದರು
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…