ಮಡಿಕೇರಿ : ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಡ್ಲಿಪೇಟೆಯ ಶಾಂತಪುರ ಗ್ರಾಮದ ಹೇವಾವತಿ ಹಿನ್ನೀರಿನ ಬಳಿ ನಡೆದಿದೆ.
ಸ್ಥಳೀಯ ಕಾರ್ಮಿಕ ಕುಮಾರ (40) ಮೃತಪಟ್ಟವರು. ಭಾನುವಾರ ಬೆಳಿಗ್ಗೆ ಭತ್ತದ ಪೈರು ನಾಟಿ ಮಾಡಲು ಕುಮಾರ ಹಾಗೂ ದೊಡ್ಡಯ್ಯ ಎಂಬವರು ಜಮೀನಿಗೆ ತೆರಳಿದ್ದರು. ಈ ಸಂದರ್ಭದಲ್ಲಿ ಹೊಳೆ ಸಮೀಪದ ಕರಿಕಡ್ಡಿ ಅರಣ್ಯ ಭಾಗದಿಂದ ಬಂದ ಕಾಡಾನೆ ಕುಮಾರ ಎಂಬವರ ಮೇಲೆ ದಾಳಿ ಮಾಡಿದೆ. ದೊಡ್ಡಯ್ಯ ಓಡಿ ಹೋಗಿ ಜೀವ ಉಳಿಸಿಕೊಂಡಿದ್ದಾರೆ. ಆದರೆ, ಕುಮಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಶನಿವಾರಸಂತೆ ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್, ವಲಯ ಅರಣ್ಯಾಧಿಕಾರಿ ಪ್ರಪುಲ್ ಶೆಟ್ಟಿ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ…
ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…
ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು 2ನೇ ಹಂತದ…
ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…