ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ
ಮೈಸೂರು: ಮೈಸೂರು ನಗರದಲ್ಲಿ ಮತ್ತೊಂದು ಹೊರ ವರ್ತುಲ ರಸ್ತೆ(ಪೆರಿಫೆರಲ್) ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸಲು ಟೆಂಡರ್ ಕರೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ರಾಜ್ಯಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಮುಂದಿನ ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಟೆಂಡರ್ ಕರೆಯುವ ಸಾಧ್ಯತೆ ಇದೆ.
ಮೈಸೂರು ನಗರವು ವಾಣಜ್ಯ ಕ್ಲಸ್ಟರ್‌ಗಳಿಂದ ಕೈಗಾರಿಕಾ ಅಭಿವೃದ್ಧಿ ಹೊಂದಲಿದ್ದು, ಸಮಗ್ರ ಬೆಳವಣಿಗೆಗೆ ಅನುಕೂಲಕರವಾಗಿರುತ್ತದೆ. ಮೈಸೂರು ನಗರಪಾಲಿಕೆಯನ್ನು ಬೃಹತ್ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೇಗೇರಿಸಲು ಉದ್ದೇಶಿಸಿರುವುದರಿಂದ ನಗರಕ್ಕೆ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣವು ಅವಶ್ಯಕವಾಗಿರುತ್ತದೆ.
ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ೮೨೪ ಎಕರೆ ಭೂಸ್ವಾಧೀನದ ಅವಶ್ಯಕತೆಯಿದ್ದು, ಭೂಸ್ವಾಧೀನಕ್ಕೆ ೧೨೩೬ ಕೋಟಿ ರೂ., ರಸ್ತೆ ನಿರ್ಮಾಣಕ್ಕೆ ೭೩೫ ಕೋಟಿ ರೂ. ಸೇರಿ ಒಟ್ಟು ೧೯೭೧ ಕೋಟಿ ರೂ.ಗಳ ವೆಚ್ಚವಾಗುತ್ತದೆಂದು ಅಂದಾಜಿಸಿದ್ದು, ಹೀಗಾಗಿ, ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಟೆಂಡರ್ ಕರೆಯಲು ಅನುಮೋದನೆ ಕೊಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಟೆಂಡರ್ ಕರೆದು ಏಜೆನ್ಸಿಯನ್ನು ನಿಯೋಜಿಸಿಕೊಳ್ಳಲು ೯.೮೫ ಕೋಟಿ ರೂ. ಅಗತ್ಯ ಇರಬಹುದೆಂದು ಅಂದಾಜಿಸಿ ಒಪ್ಪಿಗೆ ಕೊಡುವಂತೆ ನಗರಾಭಿವೃದ್ಧಿ ಇಲಾಖೆಗೆ ಕೋರಿತ್ತು. ಇದೀಗ ನಗರಾಭಿವೃದ್ಧಿ ಇಲಾಖೆಯು ಒಪ್ಪಿಗೆ ಸೂಚಿಸಿ ಹಲವಾರು ಅಂಶಗಳನ್ನು ಪಾಲಿಸುವಂತೆ ಹೇಳಿದೆ.
ಡಿಪಿಆರ್ ತಯಾರಿಕೆಗೆ ಮುಡಾದ ಸ್ವಂತ ಸಂಪನ್ಮೂಲ ಭರಿಸುವುದು, ಡಿಪಿಆರ್ ತಯಾರಾದ ನಂತರ ಯೋಜನೆಯನ್ನು ರೂಪಿಸುವ ಸಂದರ್ಭದಲ್ಲಿ ಭಾರತ್ ಮಾಲಾ-ಹಂತ ೨ ಅಥವಾ ತತ್ಸಮಾನ ಯೋಜನೆಯಲ್ಲಿ ಸೇರಿಸುವ ಬಗ್ಗೆ ಪ್ರಾಧಿಕಾರವು ನಿರ್ಣಯಿಸತಕ್ಕದ್ದೆಂದು ಹೇಳಿ ಒಪ್ಪಿಗೆ ಕೊಟ್ಟಿದೆ ಎಂದು ಮುಡಾ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಹೇಳಿದ್ದಾರೆ.
ಪೆರಿಫೆರಲ್ ರಿಂಗ್ ರಸ್ತೆಗೆ ಡಿಪಿಆರ್ ತಯಾರಿಸಲು ಸರ್ಕಾರ ಒಪ್ಪಿಗೆ ನೀಡಿರುವುದರಿಂದ ಜನವರಿ ಎರಡನೇ ವಾರದೊಳಗೆ ಟೆಂಡರ್ ಕರೆಯುತ್ತೇವೆ. ಈಗಾಗಲೇ ಕಳೆದ ಆಯವ್ಯಯದಲ್ಲಿ ೫ ಕೋಟಿ ರೂ. ಮೀಸಲಿಟ್ಟಿರುವ ಕಾರಣ ಏಜೆನ್ಸಿ ನಿಗದಿಯಾದ ತಕ್ಷಣ ಕಾರ್ಯಪ್ರವೃತ್ತರಾಗುತ್ತೇವೆ.
ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…
ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…
ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…
ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…
ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್ʻ…