ಜಿಲ್ಲೆಗಳು

ಮಹಿಳೆಯರು ಆರ್ಥಿಕ ಸ್ವಾವಲಂಬಿಳಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು : ಜನದ್ವನಿ ಬಿ. ವೆಂಕಟೇಶ್

ಹನೂರು: ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗುವ ಮೂಲಕ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಿಲ್ಲಾ ಬಿಜೆಪಿ ಒಬಿಸಿ ಜಿಲ್ಲಾ ಸಂಯೋಜಕ ಜನದ್ವನಿ ಬಿ ವೆಂಕಟೇಶ್ ತಿಳಿಸಿದರು.

ಪಟ್ಟಣದ ಆರ್.ಎಸ್. ದೊಡ್ಡಿಯ ವೆಂಕಟೇಶ್ ರವರ ಕಚೇರಿ ಮುಂಭಾಗ ಕುರುವಿಲ್ ಕ್ರಿಯೇಷನ್ ವತಿಯಿಂದ ಆಯೋಜಿಸಿದ್ದ ಮಹಿಳಾ ಸ್ವಯಂ ಉದ್ಯೋಗ ಕಲ್ಪಿಸುವ ಅರಿವು ಮತ್ತು ಚಿಂತನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂಬ ಉದ್ದೇಶದಿಂದ ಹನೂರು ಭಾಗದ ಮಹಿಳೆಯರಿಗೆ ಕರಕುಶಲ ವಸ್ತುಗಳ ತಯಾರಿ ಮತ್ತು ಮಾರುಕಟ್ಟೆ ಮಾಡುವ ಬಗ್ಗೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ನಿಮ್ಮ ಸಮಯ ಮತ್ತು ಶ್ರಮ ಜೊತೆಗೆ ಇಚ್ಛಾಶಕ್ತಿ ಅಗತ್ಯವಿದೆ.ಪ್ರಕೃತಿಗೆ ಅನುಗುಣವಾಗಿ ಆರ್ಥಿಕ ಅಭಿವೃದ್ಧಿ ಮಾಡಿಕೊಳ್ಳಲು ನರೇಂದ್ರ ಮೋದಿಯವರ ಕಾರ್ಯಕ್ರಮಗಳು ಸಹಕಾರಿಯಾಗಿದೆ. ಭಾರತೀಯ ಮಹಿಳಾ ಬ್ಯಾಂಕ್ ಮತ್ತು ಮುದ್ರಾ ಯೋಜನೆಯಲ್ಲಿ ಶಿಶು ಸಾಲ ಯೋಜನೆ ಅಡಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗೆ 50,000 ಸಾಲ ನೀಡುತ್ತಾರೆ. ಇಂತಹ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಆರ್ಥಿಕ ಸ್ವಾವಲಂಬಿಯಾಗಬೇಕು ಎಂದು ತಿಳಿಸಿದರು.
ಕುರುವಿಲ್ ಸಂಸ್ಥೆಯ ಪಿ.ಎಂ ಕುಮಾರ್ ಅವರು ಕರಕುಶಲ ಉತ್ಪನ್ನಗಳಾದ ತಾಂಬೂಲ ಬ್ಯಾಗ್. ಗಿಫ್ಟ್ ಬಾಕ್ಸ್, ಜುವೆಲ್ಲರಿ ಬಾಕ್ಸ್, ಹ್ಯಾಂಡ್ ಕಾಪ್ಟ್, ಕಾಲಂಕರಿ ಬ್ಯಾಗ್, ಯೋಗ ಮ್ಯಾಟ್. ತಯಾರಿಕೆ ಮತ್ತು ಬಳಕೆ ವಿಧಾನಗಳ ಬಗ್ಗೆ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಧಾ ಮಲ್ಲಣ್ಣ, ಮಹದೇಶ್ವರ ಮಂಡಲ ಮಹಿಳಾ ಅಧ್ಯಕ್ಷೆ ಮೀನಾ, ಜಿಲ್ಲಾ ಮಹಿಳಾ ಪ್ರಭಾರಿ ಮಂಗಳಮ್ಮ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಜಯಶೀಲ, ಪ್ರಿಯದರ್ಶಿನಿ ಕೃಷ್ಣ ರಾಜೇಶ್ವರಿ ಅಂಬಿಕಾ ಮತ್ತು ರಾಮಾಪುರ ಕೌದಳ್ಳಿ ಹೂಗ್ಯಂ ಭಾಗದ ಮಹಿಳೆಯರು ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಬಜೆಟ್ ಪರಿಸರ ಸಂರಕ್ಷಣೆಗೆ ಒತ್ತು ನೀಡಲಿ

ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…

2 hours ago

ಓದುಗರ ಪತ್ರ: ರಾಜರ ಯೋಜನೆ ಮಾದರಿಯಲ್ಲಿ ಗ್ರೇಟರ್ ಮೈಸೂರು ನಿರ್ಮಿಸಿ

ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…

2 hours ago

ಓದುಗರ ಪತ್ರ: ಸಿಗ್ನಲ್‌ನಲ್ಲಿ ವಾಹನಗಳ ಎಂಜಿನ್ ಆಫ್ ಮಾಡಿ

ಪ್ರತಿನಿತ್ಯ ನಗರದ ವಿವಿಧ ವೃತ್ತಗಳ ಸಿಗ್ನಲ್ ಬಳಿ ಕಾಯುವ ವಾಹನ ಸವಾರರು ೧೦೦ ಸೆಕೆಂಡಿಗಿಂತಲೂ ಹೆಚ್ಚು ಕಾಲ ನಿಂತರೆ ನಮ್ಮ…

2 hours ago

ಓದುಗರ ಪತ್ರ: ಹುಂಡಿ ಹಣ ಸಮಾಜ ಸೇವಾ ಕಾರ್ಯಕ್ಕೆ ಬಳಕೆಯಾಗಲಿ

ಮೈಸೂರು ನಗರದ ಸುತ್ತಮುತ್ತ ಇರುವ ವಿವಿಧ ದೇವಾಲಯಗಳನ್ನು ನಿರ್ವಹಿಸುತ್ತಿರುವ ಟ್ರಸ್ಟ್‌ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಹುಂಡಿಯ ಹಣ ಹಾಗೂ ಭಕ್ತರು ನೀಡುವ…

2 hours ago

ರಿಪೇರಿಯಾಗದ ಆಟೋ; ಬೀದಿಗೆ ಬೀಳುತ್ತಿದೆ ಕಸ

ಕೆಟ್ಟು ೨-೩ ತಿಂಗಳಾದರೂ ದುರಸ್ತಿ ಭಾಗ್ಯವಿಲ್ಲ; ಬೇಗ ರಿಪೇರಿ ಮಾಡಿಸಲು ನಾಗರಿಕರ ಆಗ್ರಹ  ಚಾಮರಾಜನಗರ: ನಗರದಲ್ಲಿ ನೈರ್ಮಲ್ಯ ಕಾಪಾಡಲು ನಗರಸಭೆಯು…

2 hours ago

ಮೈವಿವಿ ಪ್ರಸಾರಾಂಗ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ

ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗವು ಆಯೋಜಿಸಿರುವ ವಿಶೇಷ ರಿಯಾಯಿತಿ ಪುಸ್ತಕ ಮಾರಾಟಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

2 hours ago