ಜಿಲ್ಲೆಗಳು

ಕೊನೆಗೂ ಕೋಟೆ ತಾಪಂ ನೂತನ ಕಚೇರಿ ಕಟ್ಟಡ ನಿರ್ಮಾಣ

3 ವರ್ಷಗಳಿಂದ ನಡೆಯದೆ ಸ್ಥಗಿತಗೊಂಡಿದ್ದ ಕಾಮಗಾರಿ; ಶಾಸಕರ ಸೂಚನೆ ಮೇರೆಗೆ ಕಟ್ಟಡ ಪೂರ್ಣ

ಮಂಜು ಕೋಟೆ

ಎಚ್.ಡಿ.ಕೋಟೆ: ಹಳೆಯ ಕಟ್ಟಡದಲ್ಲಿ ಪ್ರಾಣಭಯದಿಂದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿ ಮತ್ತು ನೌಕರರಿಗೆ ಕೊನೆಗೂ ಒಂದೂವರೆ ಕೋಟಿ ರೂ. ವೆಚ್ಚದ ನೂತನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡುವಲ್ಲಿ ಜನಪ್ರತಿನಿಧಿಗಳು ಮತ್ತು ಗುತ್ತಿಗೆದಾರರು ಮುಂದಾಗಿದ್ದಾರೆ.
ತಾಲ್ಲೂಕಿನ ಕೇಂದ್ರ ಸ್ಥಾನದ ಪಟ್ಟಣದಲ್ಲಿ ದುಸ್ಥಿತಿಯಲ್ಲಿರುವ ಹಳೆ ತಾಪಂ ಕಚೇರಿಯ ಕಟ್ಟಡದಲ್ಲಿ ಅಧಿಕಾರಿ ಮತ್ತು ನೌಕರ ವರ್ಗದವರು ಹಲವಾರು ವರ್ಷಗಳಿಂದ ಪ್ರಾಣ ಭಯದಿಂದ ಕೆಲಸ ನಿರ್ವಹಿಸುತ್ತಿದ್ದರು. ೨೦೧೮ಮತ್ತು ೨೦೧೯ನೇ ಸಾಲಿನಲ್ಲಿ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯರು ನೂತನ ಕಾರ್ಯಾಲಯದ ಕಟ್ಟಡ ಮತ್ತು ಇನ್ನಿತರ ಕೊಠಡಿ ನಿರ್ಮಾಣಕ್ಕೆ ೨ ಕೋಟಿ ರೂ. ಅನುದಾನವನ್ನು ನೀಡಲಾಗಿತ್ತು. ನಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವಿ.ಸೋಮಣ್ಣ ಮತ್ತು ಶಾಸಕ ಅನಿಲ್ ಚಿಕ್ಕಮಾದು, ಜಿಪಂ ಸಿಇಒ ರಾಮಲಿಂಗಯ್ಯ ಮತ್ತಿತರರು ನೂತನ ಕಟ್ಟಡದ ಕಾಮಗಾರಿಗೆ ಚಾಲನೆ ನೀಡಿದ್ದರು.
ಲ್ಯಾಂಡ್ ಆರ್ಮಿಯ ಮೂಲಕ ಕಾಮಗಾರಿ ಪಡೆದ ಮೈಸೂರಿನ ಗುತ್ತಿಗೆದಾರ ಬಸವರಾಜು ೩ ವರ್ಷಗಳಾದರೂ ಸಕ್ರಿಯವಾಗಿ ಕಾಮಗಾರಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ೩ ತಿಂಗಳ ಹಿಂದೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೆಂಡಾಮಂಡಲರಾದ ಶಾಸಕ ಅನಿಲ್ ಚಿಕ್ಕಮಾದು ಅಧಿಕಾರಿ ಮತ್ತು ಲ್ಯಾಂಡ್ ಆರ್ಮಿಯವರನ್ನು ತರಾಟೆಗೆ ತೆಗೆದುಕೊಂಡು ಹಳೆ ಕಟ್ಟಡದಲ್ಲಿ ಅಧಿಕಾರಿಗಳು ಪ್ರಾಣ ಭಯದಿಂದ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ನೂತನ ಕಟ್ಟಡ ಕಾಮಗಾರಿ ಇನ್ನೂ ಪೂರ್ಣಗೊಳಿಸಿಲ್ಲ. ಗುತ್ತಿಗೆದಾರರನ್ನು ತೆಗೆದು ಹಾಕಿ ಬೇರೆಯವರಿಗೆ ನೀಡಿ ಎಂದು ಹೇಳಿ ಅಲ್ಲೇ ಇದ್ದ ಕೃಷ್ಣಾಪುರದ ಪ್ರಥಮ ದರ್ಜೆ ಗುತ್ತಿಗೆದಾರ ಪರಶಿವಮೂರ್ತಿ ಅವರಿಗೆ ನೀವೇ ೨ ತಿಂಗಳೊಳಗಾಗಿ ನೂತನ ಕಟ್ಟಡ ನಿರ್ಮಾಣ ಮಾಡಿ ಎಂದು ಹೇಳಿ ಅಧಿಕಾರಿಗಳಿಗೂ ಸೂಚಿಸಿದ್ದರು.
ಅಂದಿನ  ಕ್ರೀಯಾಯೋಜನೆಯಂತೆ  ಪರಶಿವಮೂರ್ತಿ ಅವರು ಶಾಸಕರ ನಿರ್ದೇಶನದಂತೆ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಆಗಿ ಮೀಟಿಂಗ್ ಹಾಲ್ ಸೇರಿ ಬೃಹತ್ ೪ ಕೊಠಡಿಗಳನ್ನು ಒಳಗೊಂಡ ತಾಪಂ ನೂತನ ಕಾರ್ಯಾಲಯದ ಕಟ್ಟಡ ನಿರ್ಮಾಣ ಮಾಡಿದ್ದು, ಈಗ ಉದ್ಘಾಟನೆಗೆ ಸಿದ್ಧಗೊಂಡಿದೆ.


ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ತಾಪಂ ಕಚೇರಿ ಕಟ್ಟಡ ಉತ್ತಮವಾಗಿ ನಿರ್ಮಾಣಗೊಂಡಿದೆ. ಸರಕಾರದಿಂದ ೧.೪೦ ಕೋಟಿ ರೂ. ಬಿಡುಗಡೆಯಾಗಿದ್ದು, ಉಳಿಕೆ ಅನುದಾನಕ್ಕೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನೂತನ ಸಮುದಾಯ ಭವನದ ಪಕ್ಕದಲ್ಲಿ ೪೦ ಲಕ್ಷ ರೂ. ವೆಚ್ಚದಲ್ಲಿ ರೆಕಾರ್ಡ್ ರೂಂ ಸಹ ನಿರ್ಮಾಣಗೊಳ್ಳಲಿದೆ.
-ಪ್ರಮೋದ್, ಎಇಇ, ಲ್ಯಾಂಡ್ ಆರ್ಮಿ


೨೦೧೮-೧೯ನೇ ಸಾಲಿನ ಎಸ್‌ಆರ್ ದರದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದೇನೆ. ನನಗೆ ನಷ್ಟವಾಗಿದ್ದರೂ ಶಾಸಕರ ಮತ್ತು ತಾಲ್ಲೂಕಿನಲ್ಲಿ ಹಿತದೃಷ್ಟಿಯಿಂದ ಅನುದಾನದ ಕೊರತೆ ಇದ್ದರೂ ತಾಪಂ ನೂತನ ಕಾರ್ಯಾಲಯದ ಕಟ್ಟಡ ಕ್ರಿಯಾ ೋಂಜನೆಯಂತೆ ನಿರ್ಮಾಣ ಮಾಡಿಸಲಾಗಿದೆ. ಪೂರ್ಣಗೊಂಡಿರುವ ಕಟ್ಟಡವನ್ನು ಶಾಸಕರು ಬಂದು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿ ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದಿದ್ದಾರೆ.
-ಪರಶಿವಮೂರ್ತಿ ಕೃಷ್ಣಾಪುರ, ಪ್ರಥಮ ದರ್ಜೆ ಗುತ್ತಿಗೆದಾರ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago