ಮಂಡ್ಯ : ವಿದ್ಯುತ್ ಶಾರ್ಟ್ ಸಕ್ಯೂರ್ಟ್ ನಿಂದ ಬೆಲ್ಟ್ ಕಾರ್ಖಾನೆ ಹೊತ್ತಿ ಉರಿದ ಘಟನೆ ನಡೆದಿದೆ.
ಜಿಲ್ಲೆಯ ತೂಬಿನಕೆರೆ ಗ್ರಾಮದ ಕೈಗಾರಿಕಾ ಪ್ರವೇಶದಲ್ಲಿ ಪ್ಲೇಕಾನ್ ಹೆಸರಿನ ಕಾರ್ಖಾನೆಯಲ್ಲಿ ಘಟನೆ ಸಂಭವಿಸಿದ್ದು, ಮುಂಜಾನೆ ೪ ಗಂಟೆ ಸುಮಾರಿಗೆ ಬೆಲ್ಟ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಬೆಲ್ಟ್ ಫ್ಯಾಕ್ಟರಿ ಹೊತ್ತಿ ಉರಿದಿದೆ.
ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.





