ನಿನ್ನೆ ( ಡಿಸೆಂಬರ್ 1 ) ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿನ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇಡೀ ಘಟಕ ಹೊತ್ತಿ ಉರಿದಿದೆ. ಅಲ್ಲಿನ ಓವನ್‌ಗೆ ಸಂಪರ್ಕ ಮಾಡಲಾಗಿದ್ದ ಸಿಲಿಂಡರ್ ಖಾಲಿಯಾದ ಕಾರಣ ಸಿಬ್ಬಂದಿಯೊಬ್ಬರು ಅದನ್ನು ಬದಲಿಸಲು ಹೋದಾಗ ಈ ಅವಘಡ ಸಂಭವಿಸಿದೆ.
ಲಾಡು ತಯಾರಿಕಾ ಘಟಕವಾದ ಕಾರಣ ಎಣ್ಣೆ ಹಾಗೂ ಜಿಡ್ಡಿನ ಅಂಶ ಮತ್ತು ಎಣ್ಣೆ ಪದಾರ್ಥಗಳೇ ಹೆಚ್ಚಿದ್ದ ಕಾರಣ ಬೆಂಕಿ ಬಹುಬೇಗನೆ ಎಲ್ಲೆಡೆ ಹಬ್ಬಿದೆ. ಹೀಗಾಗಿ ಘಟಕದಲ್ಲಿದ್ದ ಎಲ್ಲರೂ ಆಚೆ ಓಡಿ ಬಂದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಈ ಅವಘಡದಿಂದ ಬರೋಬ್ಬರಿ 10.26 ಲಕ್ಷ ರೂಪಾಯಿಗಳ ನಷ್ಟವಾಗಿದೆ ಎಂದು ತಿಳಿದುಬಂದಿದೆ.
ಘಟಕದಲ್ಲಿ ಇರಿಸಲಾಗಿದ್ದ 9 ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆ ಹಿಟ್ಟು, 40 ಕೆಜಿ ನಂದಿನಿತುಪ್ಪ, 30 ಕೆಜಿ ದ್ರಾಕ್ಷಿ ಹಾಗೂ 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿದೆ. ಇನ್ನು ಈ ಅವಘಡದಿಂದ ಲಾಡು ಕೊರತೆ ಉಂಟಾಗಿದ್ದು ಮಹದೇಶ್ವರ ಕ್ಷೇತ್ರದಲ್ಲಿ ತಾತ್ಕಾಲಿಕವಾಗಿ ಲಾಡು ಮಾರಾಟ ನಿಲ್ಲಿಸಲಾಗಿದೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…