ಮೈಸೂರು: ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಮಂಗಳವಾರ ರಾತ್ರಿ 7.30ರಲ್ಲಿ ಚಾಮುಂಡಿಬೆಟ್ಟದ ಉತ್ತನಹಳ್ಳಿ ಭಾಗದಲ್ಲಿ ಸುಮಾರು 4ಕ್ಕೂ ಹೆಚ್ಚು ಎಕರೆ ಪ್ರದೇಶದಲ್ಲಿದ್ದ ಹುಲ್ಲು, ಕುರುಚಲು ಗಿಡಗಳು ಸುಟ್ಟು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು 3 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸಿದರು. ಉತ್ತನಹಳ್ಳಿಯ ಭಾಗದ ಕಡೆಗಳಲ್ಲಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಈ ಘಟನೆ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ೨೪ ಮತ್ತು ಅರಣ್ಯ ಇಲಾಖೆಯ 20 ಮಂದಿ ಸಿಬ್ಬಂದಿ, ಕಾರ್ಯಾಚರಣೆಯನ್ನು ರಾತ್ರಿ 10.30ರವರೆಗೂ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸುಮಾರು ನಾಲ್ಕು ಅಗ್ನಿ ಶಾಮಕ ವಾಹನಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದವು.
ಮಂಗಳವಾರ ರಾತ್ರಿ 7.30ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಬಂದ ಕೂಡಲೇ ನಾಲ್ಕು ಅಗ್ನಿಶಾಮಕ ವಾಹನಗಳು ಮತ್ತು 24 ಮಂದಿ ಸಿಬ್ಬಂದಿ ಹೋಗಿ ಬೆಂಕಿ ನಂದಿಸಲಾಗಿದೆ.
-ರಾಜು, ಜಿಲ್ಲಾ ಅಗ್ನಿಶಾಮಕ ಅಧಿಕಾರಿ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…