ಚಾಮರಾಜನಗರ: ಮೊಟ್ಟಮೊದಲ ಬಾರಿಗೆ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹದೇಶ್ವರ ಬೆಟ್ಟದಲ್ಲಿ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಪೌರಕಾರ್ಮಿಕ ದಿನಾಚರಣೆಯನ್ನು ಅಪರ ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿನೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣ ಸಮಿತಿ ಸದಸ್ಯ ಶಂಕರ ಸಿ ಅಂಕನಶಟ್ಟಿಪುರ ಅವರು ಮಾತನಾಡಿ ೧೯೭೧ ರಲ್ಲಿ ಬಿ.ಬಸಲಿಂಗಪ್ಪ ಅವರು ಪೌರಾಡಳಿತ ಸಚಿವರಾಗಿದ್ದ ಸಂದರ್ಭದಲ್ಲಿ ಮಲ ಹೊರುವ ಪದ್ಧತಿ ರದ್ದು ಮಾಡುವ ವಿಧೇಯಕ ಮಂಡನೆ ಮಾಡುತ್ತಾರೆ. ಅದೇ ವೇಳೆ ಜಾಡಮಾಲಿ ಪದ ತೆಗೆದು ಪೌರಕಾರ್ಮಿಕ ಅನ್ನೋ ಪದ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಿದ ನೆನಪಿನಲ್ಲಿ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮಾತ್ರ ಈ ವರೆಗೂ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿತ್ತು, ಆದರೆ ಇದೇ ಮೊದಲ ಬಾರಿಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ಆಚರಣೆ ಮಾಡುತ್ತಿರುವುದು ಸಂತೋಷದ ಸಂಗತಿಯಾಗಿದ್ದು ಈ ದಿನ ಇತಿಹಾಸದ ಪುಟಗಳಲ್ಲಿ ಸೇರಿತು ಎಂದು ತಿಳಿಸಿದರು. ಈ ವೇಳೆ ೨೨ ಜನ ಪೌರಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು. ನಿವೃತ್ತ ಇಂಜಿನಿಯರ್ ಕುಮಾರ್, ಪರಿಸರ ಮತ್ತು ಆರೋಗ್ಯ ಸಲಹೆಗಾರ ಜಗದೀಶ್, ಪ್ರಾಧಿಕಾರದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ್, ಉಪಕಾರ್ಯದರ್ಶಿ ಬಸವರಾಜು, ಅಪ್ಪಿ ನಾಗೇಂದ್ರ, ಎಂ ಪಿ ಗೋಪಾಲ್ ನಾಗೇಶ್ ಹಾಗೂ ನೂರಕ್ಕೂ ಹೆಚ್ಚು ಪೌರಕಾರ್ಮಿಕರು ಉಪಸ್ಥಿತರಿದ್ದರು.
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…