ಜಿಲ್ಲೆಗಳು

ವಿತ್ತೀಯ ಕೊರತೆ: ವಿವಿ ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆಗೆ ನಕಾರ

ಮೈಸೂರು ವಿವಿ ವೇತನ ಪರಿಷ್ಕರಣೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಭಾರೀ ನಿರಾಶೆ*ಅಧಿಕ ಸಂಖ್ಯೆಯ ತಾತ್ಕಾಲಿಕ ಸಿಬ್ಬಂದಿ ಮರು ಪರಿಶೀಲನೆಗೆ ಸೂಚನೆ

ಕೆ.ಬಿ.ರಮೇಶನಾಯಕ

ಮೈಸೂರು: ಅಧ್ಯಾಪಕರ ಕೊರತೆ ಕಾಡುತ್ತಿರುವುದರಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಂಡಿದ್ದ ಮೈಸೂರು ವಿವಿಯು ಮಂಜೂರಾಗಿದ್ದ ಹುದ್ದೆಗಳಿಗೂ ಮೀರಿ ಅಧಿಕ ಸಂಖ್ಯೆಯಲ್ಲಿ ನೇಮಿಸಿಕೊಂಡಿರುವವರನ್ನು ಮರು ಪರಿಶೀಲಿಸುವ ಜತೆಗೆ ವೇತನ ಪರಿಷ್ಕರಣೆ ಪ್ರಸ್ತಾವನೆಯನ್ನು ತಿರಸ್ಕರಿಸಿ ದೊಡ್ಡ ಶಾಕ್ ನೀಡಿದೆ.

ವೇತನ ಪರಿಷ್ಕರಣೆ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದ ವಿವಿಯ ತೀರ್ಮಾನಕ್ಕೆ ಬ್ರೇಕ್ ಹಾಕಿರುವ ಆರ್ಥಿಕ ಇಲಾಖೆಯು ವೇತನ ಪರಿಷ್ಕರಣೆ ವಾರ್ಷಿಕ 4.71 ಕೋಟಿ ರೂ.ಗಳ ಹೆಚ್ಚುವರಿ ಆರ್ಥಿಕ ವೆಚ್ಚಕ್ಕೆ ಅನುಮೋದನೆ ಕೊಡದೆ ತಿರಸ್ಕರಿಸಿದೆ. ಇದರಿಂದಾಗಿ ಪ್ರತಿಭಟನೆ ವಾಪಸ್ ಪಡೆದುಕೊಂಡು ವೇತನ ಹೆಚ್ಚಳದ ಭರವಸೆಯಲ್ಲಿದ್ದ ಅತಿಥಿ ಉಪನ್ಯಾಸಕರಿಗೆ ಭಾರೀ ಹಿನ್ನಡೆ ಮತ್ತು ನಿರಾಶೆಯಾಗಿದೆ.

ಮೈಸೂರು ವಿವಿಯ ಹಣಕಾಸು ಸಮಿತಿ ಸಭೆಯ ಮುಂದೆ ವಿವಿಯ ವಿವಿಧ ವಿಭಾಗಗಳು ಹಾಗೂ ಪಿಜಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಮತ್ತು ಇತರೆ ತಾತ್ಕಾಲಿಕ ಬೋಧಕೇತರ ಸಿಬ್ಬಂದಿಗಳ ವೇತನ ಪರಿಷ್ಕರಣೆ ಮಾಡಿರುವ ಹಿನ್ನಲೆಯಲ್ಲಿ 4.71 ಕೋಟಿ ರೂ.ಗಳ ಹೆಚ್ಚುವರಿ ವೇತನ ಪರಿಷ್ಕರಣೆ ತೀರ್ಮಾನ ಮಾಡಿ ಸರ್ಕಾರಕ್ಕೆ ಅನುಮೋದನೆಗೆ ಕಳುಹಿಸಿತ್ತು. ಇದರಿಂದಾಗಿ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಅವರು ಮೈಸೂರು ವಿವಿಯ ಹಣಕಾಸು ಸಮಿತಿ ವಿಶೇಷ ಸಭೆ ನಡೆಸಿ ಸಂಪೂರ್ಣವಾದ ವಿವರಣೆ ಪಡೆದುಕೊಂಡಿದ್ದರು. ಈ ವರದಿಯ ಪ್ರಕಾರ ವಿತ್ತೀಯ ಕೊರತೆ ಎದುರಿಸುವ ಜತೆಗೆ ಅಗತ್ಯಕ್ಕಿಂತಲೂ ಮೀರಿ ಖರ್ಚು ಮಾಡಿರುವ ಕಾರಣ ಅನುಮೋದನೆಗೆ ನಿರಾಕರಿಸಿ ವಿವಿಗೆ ಪತ್ರ ಬರೆದು ಸರಿಪಡಿಸಿಕೊಳ್ಳುವಂತೆ ಸೂಚಿಸಿದೆ.

ವರ್ಷದಿಂದ ವರ್ಷಕ್ಕೆ ಕೊರತೆ ಹೆಚ್ಚಳ: ಮೈಸೂರು ವಿವಿಯ ಹಣಕಾಸು ಸಮಿತಿ ಮುಂದೆ ಮಂಡಿಸಿದ ಪ್ರಕಾರ 2020-2021ನೇ ಸಾಲಿನ ಆದಾಯ ಮತ್ತು ವೆಚ್ಚದ ಪಟ್ಟಿಯ ಪ್ರಕಾರ ಒಟ್ಟು ಆದಾಯ ೩೦೧.೭೮ ಕೋಟಿ ರೂ. ಇದ್ದರೆ, 325.66 ಕೋಟಿ ರೂ. ವೆಚ್ಚವಾಗಿ  23.88 ಕೋಟಿ ರೂ. ವಿತ್ತೀಯ ಕೊರತೆ, 2021-22ನೇ ಸಾಲಿನಲ್ಲಿ 278.98 ಕೋಟಿ ರೂ. ಆದಾಯ,  319.15  ಕೋಟಿ ರೂ. ವೆಚ್ಚವಾಗಿದ್ದು, 40.17ಕೋಟಿ ರೂ. ವಿತ್ತೀಯ ಕೊರತೆಯಲ್ಲಿ ದುಪ್ಪಟ್ಟಾಗಿದೆ. ಮೈಸೂರು ವಿವಿಯು ಅತಿಥಿ ಉಪನ್ಯಾಸಕರ ಹಾಗೂ ತಾತ್ಕಾಲಿಕ ಬೋಧಕೇತರ ಸಿಬ್ಬಂದಿ ವೇತನ ಪಾವತಿಗಾಗಿ ಈಗಾಗಲೇ ವಾರ್ಷಿಕ 43.13 ಕೋಟಿ ರೂ.ಗಳನ್ನು ವೆಚ್ಚ ಮಾಡುತ್ತಿದೆ. ಈ ಸಿಬ್ಬಂದಿಗಳ ವೇತನವನ್ನು ನವೆಂಬರ್ 2020ರಲ್ಲಿ ಪರಿಷ್ಕರಿಸಿದ್ದು, ಕೇವಲ ಎರಡು ವರ್ಷಗಳ ಅವಧಿಯಲ್ಲಿ ಪುನಃ ವೇತನ ಪರಿಷ್ಕರಿಸಲು ಯಾವುದೇ ಸಮರ್ಥನೆ ಇರುವುದಿಲ್ಲ. ಪ್ರಸ್ತಾಪಿತ ವೇತನ ಪರಿಷ್ಕರಣೆ ಗಮನಿಸಿದಾಗ ಎಲ್ಲ ಹಂತದಲ್ಲಿ ವೇತನವನ್ನು ಸರಿ ಸುಮಾರು ದುಪ್ಪಟ್ಟು ಹೆಚ್ಚು ಮಾಡಲಾಗಿರುತ್ತದೆ. 12 ಗಂಟೆಗಳ ಕಾರ್ಯಭಾರ ಹೊಂದಿರುವ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರ ವೇತನವನ್ನು 28ರಿಂದ 37 ಸಾವಿರ ರೂ., ಯುಜಿಸಿ ವಿದ್ಯಾರ್ಹತೆ ಹೊಂದಿಲ್ಲದವರಿಗೆ 24ರಿಂದ26.400 ರೂ. ಹಾಗೂ ಕೆಲವು ಉಪನ್ಯಾಸಕರಿಗೆ ಮಾಸಿಕ ಗರಿಷ್ಠ 60 ಸಾವಿರ ರೂ.ಗಳಿಗೆ ವೇತನ ಹೆಚ್ಚಿಸಿರುವುದು ಯುಜಿಸಿಯು ಪೂರ್ಣಕಾರ್ಯಭಾರಕ್ಕೆ ನಿಗದಿಪಡಿಸಿರುವ ಗರಿಷ್ಠ ವೇತನಕ್ಕಿಂತಲೂ ಹೆಚ್ಚಾಗಿರುತ್ತದೆ. ಇದಲ್ಲದೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ನಿಗದಿಪಡಿಸಿರುವ ಸಂಭಾವನೆಗಿಂತಲೂ ಹೆಚ್ಚಿರುತ್ತದೆ. ಹಾಗಾಗಿ, ಸರ್ಕಾರದ ಆದೇಶದಲ್ಲಿ ನಿಗದಿಪಡಿಸಿರುವ ಮಾನದಂಡಗಳನ್ವಯ ವೇತನವನ್ನು ನಿಗದಿಪಡಿಸಲು ಕ್ರಮವಹಿಸುವಂತೆ ಸೂಚನೆ ಕೊಟ್ಟಿದೆ. ವಿಶೇಷವಾಗಿ ಬೋಧಕ-ಬೋಧಕೇತರ ವೃಂದಗಳಲ್ಲಿ ಮಂಜೂರಾಗಿರುವ ಹುದ್ದೆಗಳಿಗೂ ಮೀರಿ ಅಧಿಕ ಸಂಖ್ಯೆಯಲ್ಲಿ ತಾತ್ಕಾಲಿಕ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡಿರುವುದರಲ್ಲಿ ಮರುಪರಿಶೀಲಿಸುವಂತೆ ಕುಲಪತಿಗಳಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.


ಸರ್ಕಾರದ ವಿರುದ್ಧ ನಿರ್ಣಯ ಮಾಡಲಾಗದು. ವಿವಿಯ ವ್ಯವಸ್ಥೆಯನ್ನು ಸರ್ಕಾರದ ಗಮನಕ್ಕೆ ತಂದು ಅನುಮೋದನೆಗೆ ಒಪ್ಪಿಗೆ ಪಡೆಯಲು ಪ್ರಯತ್ನ ಮಾಡುತ್ತೇವೆ. ಸಿಂಡಿಕೇಟ್ ಸಭೆಯಲ್ಲಿ ವೇತನ ಪರಿಷ್ಕರಣೆಗೆ ಒಪ್ಪಿಗೆ ಸಿಕ್ಕಿದರೂ ಸರ್ಕಾರ ನಿರಾಕರಿಸಿರುವುದರಿಂದ ಚಿಂತೆ ಮಾಡಬೇಕಿದೆ.

-ಪ್ರೊ.ಎಚ್.ರಾಜಶೇಖರ್, ಪ್ರಭಾರ ಕುಲಪತಿ.


ಹಣಕಾಸು ಸಮಿತಿ ಸಭೆಯಲ್ಲಿ ಆರ್ಥಿಕ ಇಲಾಖೆ ಕಾರ್ಯದರ್ಶಿಗಳು ನೀಡಿರುವ ಸೂಚನೆಯನ್ನು ಪರಿಗಣಿಸಲಾಗಿದೆ. ಈ ವಿಚಾರದಲ್ಲಿ ಕುಲಪತಿಗಳು ಮತ್ತು ಸಿಂಡಿಕೇಟ್ ಸಭೆಯಲ್ಲಿ ನಿರ್ಧಾರ ಆಗಬೇಕಿದೆ.

-ವಿ.ಆರ್.ಶೈಲಜ, ಕುಲಸಚಿವರು.

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

8 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

13 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

17 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

17 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

17 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

20 hours ago