ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾದ ಹಲವಾರು ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಅತ್ಯಂತ ಹೆಚ್ಚು ಜನರನ್ನುಗಮನ ಸೆಳೆಯುವಂತದ್ದು, ಈ ಸಾಲಿನ ದಸರೆಯಲ್ಲಿ ಅರಮನೆ ಆವರಣದಲ್ಲಿ ಮೊದಲ ಬಾರಿಗೆ ಸೆ.26ರಿಂದ 10 ದಿನಗಳ ಕಾಲ ಅತ್ಯಾಕರ್ಷಕ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.
ಸುಮಾರು 32 ಜಾತಿಯ ಹೂವಿನ ಗಿಡಗಳು, ಕ್ರೈಸಾಂಥಿಮಮ್, ಪಿಂಗ್ ಪಾಂಗ್, ಕಾರ್ನೆಷನ್ ಸೇರಿದಂತೆ ನಾಲ್ಕು ಲಕ್ಷ ವಿವಿಧ ಹೂವುಗಳು 15 ಸಾವಿರ ವಿಭಿನ್ನ ರೀತಿಯ ಅಲಂಕಾರಿಕ ಹೂವಿನ ಕುಂಡಗಳಿಂದ ಅರಮೆನ ಅಂಗಳವನ್ನು ಅಲಂಕರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತಾವರಿ ಸಚಿವರಾದ ಎಸ್ ಟಿ ಸೋಮಶೇಖರ್ ಅವರು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಮಾಹಿತಿಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಇನ್ನಿತರರು ಹಾಜರಿದ್ದರು