ಜಿಲ್ಲೆಗಳು

ಕೆಎಸ್‌ಆರ್‌ಟಿಸಿ ಯಿಂದ ಫ್ಲೈಬಸ್‌ ಸೇವೆ ಆರಂಭ

ಬೆಂಗಳೂರು:  ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್‌ಆರ್‌ ಟಿಸಿಯಿಂದ ಒಟ್ಟು 13 ಫ್ಲೈಬಸ್ ಸೇವೆಗಳನ್ನು 42 ಟ್ರಿಪ್‍ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಒದಗಿಸಲಾಗಿದೆ ಎಂದು ಸಾರಿಗೆ ಸಚಿವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಶುಕ್ರವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಎರಡನೆ ಟರ್ಮಿನಲ್ ನಿಂದ ನಿಗಮದ ಫ್ಲೈಬಸ್ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ಫ್ಲೈಬಸ್ ಪ್ರತಿಷ್ಠಿತ ವಾಹನಗಳಲ್ಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುವ ಪ್ರಯಾಣಿಕರಿಗೆ ಸಮಯವು ಪ್ರಾಮುಖವಾದ ಕಾರಣ, ಹಾಗಾಗಿ ಫ್ಲೈ ಬಸ್‍ಗಳಲ್ಲಿ ನಿರ್ದಿಷ್ಟ ನಿಲುಗಡೆಗಳು ಮಾತ್ರ ಇರುತ್ತವೆ ಎಂದರು.

ಪ್ರಯಾಣಿಕರು ಮೈಸೂರು ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಇತರೆ ವಾಹನದಲ್ಲಿ ಪ್ರಯಾಣಿಸಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲು ಬಿಎಂಟಿಸಿ ಬಸ್ ಅಥವಾ ವೋಲಾ, ಉಬರ್ ಬಳಸಿದಲ್ಲಿ ಪ್ರತ್ಯೇಕ ಪ್ರಯಾಣದರ ಪಾವತಿಸಿ, ದುಪ್ಪಟ್ಟುದರದೊಂದಿಗೆ ಪ್ರಯಾಣಿಸಬೇಕಾಗಿರುತ್ತದೆ. ಅಲ್ಲದೇ ಎರಡು ಸ್ಥಳಗಳಲ್ಲಿ ವಾಹನ ಬದಲಾವಣೆ ಮಾಡಬೇಕಾಗಿರುತ್ತದೆ. ಇದರಿಂದ ಪ್ರಯಾಣಿಕರಿಗೆ ಸಮಯದ, ಹಣದ ವ್ಯರ್ಥವಾಗುತ್ತದೆ ಎಂದರು.

ಫ್ಲೈ ಬಸ್‍ನಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಜೈವಿಕ ಶೌಚಾಲಯ ವ್ಯವಸ್ಥೆ ಇರುತ್ತದೆ. ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಹೆಚ್ಚಿನ ಲಗೇಜುಗಳನ್ನು ಕೊಂಡೊಯ್ಯುವುದರಿಂದ ಪ್ರಯಾಣಿಕರುಕೊಂಡೊಯ್ಯುವ ಸ್ವಂತ ಲಗೇಜುಗಳಿಗೆ ಯಾವುದೇ ಮಿತಿ ಇರುವುದಿಲ್ಲ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಹಿರಿಯ ಅಧಿಕಾರಿ ಜಿ.ಸತ್ಯವತಿ ಸೇರಿದಂತೆ ಮತ್ತಿತರ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago