ಜಿಲ್ಲೆಗಳು

ಜಾನಪದ ತವರಿನ ಇಬ್ಬರಿಗೆ ರಾಜ್ಯದ ಗೌರವ ಸಿಕ್ಕಿರುವುದು ಶ್ಲಾಘನೀಯ : ಶಾಸಕ ಆರ್. ನರೇಂದ್ರ

ಹನೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 67 ಸಾಧಕರನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಈ ಪೈಕಿ ಒಬ್ಬರು ನಮ್ಮ ಕ್ಷೇತ್ರದವರು ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತಿದೆ, ಅವರಿಗೆ ಸಿಕ್ಕಿರುವ ಪ್ರಶಸ್ತಿ ತಾಲ್ಲೂಕಿನ ಸಂದ ಗೌರವವಾಗಿದೆ ಎಂದು ಶಾಸಕ ಆರ್. ನರೇಂದ್ರ ಶ್ಲಾಘಿಸಿದರು.

ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಗುರುವಾರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಜೀರಿಗೆಗದ್ದೆ ಮಾದಮ್ಮ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಜಾನಪದ ಕಲಾವಿದರ ನೆಲೆ ಎಂದೇ ಖ್ಯಾತಿ ಗಳಿಸಿರುವ ಚಾಮರಾಜನಗರ ಜಿಲ್ಲೆಯಲ್ಲಿ ಈ ಬಾರಿ ಇಬ್ಬರಿಗೆ ರಾಜ್ಯ ಸರ್ಕಾರ ಗುರುತಿಸಿ ಸನ್ಮಾನಿಸಿರುವುದು ಸಂತಸದ ವಿಚಾರ. ಚಿತ್ರನಟ ಪುನಿತ್ ರಾಜ್ ಕುಮಾರ್ ಸಾಯುವವರೆಗೂ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳು ಬೆಳಕಿಗೆ ಬಂದಿರಲಿಲ್ಲ. ರಾಜ್ಯದ ಎಲ್ಲೆಯನ್ನು ದಾಟಿ ಅವರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು.
ಬದುಕಿದ್ದಾಗ ಮಹಾನ್ ಮಾನವಾತವಾದ ಕೆಲಸ ಮಾಡುವುದರ ಮೂಲಕ ಎಲೆಮರೆ ಕಾಯಿಯಂತಿದ್ದ ಪುನಿತ್ ರಾಜ್ ಕುಮಾರ್ ಸತ್ತಮೇಲೂ ಅಂಗಾಂಗಗಳನ್ನು ದಾನ ಮಾಡುವ ಮೂಲಕ ರಾಜ್ಯದ ಯುವಕರಿಗೆ ಮಾದರಿಯಾಗಿದ್ದಾರೆ. ಇವರ ಪ್ರೇರಣೆಯಿಂದಾಗಿ 85 ಸಾವಿರಕ್ಕೂ ಹೆಚ್ಚು ಜನ ನೇತ್ರದಾನ ಹಾಗೂ 600 ಜನ ಅಂಗಾಂಗ ದಾನಕ್ಕೆ ನೋಂದಣಿ ಮಾಡಿದ್ದಾರೆ. ಇವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಮೂಲಕ ಅವರನ್ನು ಗೌರವಿಸಿರುವುದು ಹೆಮ್ಮೆಯ ಸಂಗತಿ ಎಂದರು.

ಇಂದಿನ ದಿನಗಳಲ್ಲಿ ಪ್ರತಿ ಅಂಗಾಂಗಳಿಗೂ ಒಬ್ಬೊಬ್ಬ ವೈದ್ಯರಿದ್ದಾರೆ. ಆದರೆ ಕಳೆದ ಐದಾರು ದಶಕಗಳಿಂದಲೂ ಎಲ್ಲಾ ರೋಗಗಳಿಗೂ ಔಷಧಿ ನೀಡುವ ಮೂಲಕ ಜನ್ನಣೆ ಗಳಿಸಿರುವ ಜೀರಿಗೆಗದ್ದೆ ಮಾದಮ್ಮ ಅವರು ಈ ಬಾರಿಯ ಕನ್ನಡ ರಾಜ್ಯೋತ್ಸವ ಪುರಸ್ಕಾರಕ್ಕೆ ಬಾಜನರಾಗಿರುವುದು ಶ್ಲಾಘನೀಯ ವಿಚಾರ ಮುಂದಿನ ದಿನಗಳಲ್ಲಿ ಅವರ ಸೇವೆ ಮತ್ತಷ್ಟು ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಪಪಂ ಉಪಾಧ್ಯಕ್ಷ ಗಿರೀಶ್, ಸದಸ್ಯ ಹರೀಶ್ ಇಒ ಶ್ರೀನಿವಾಸ್ ,ಮುಖ್ಯಾಧಿಕಾರಿ ಮೂರ್ತಿ,ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಾಧರ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್,ಉಪನೋಂದಣಾಧಿಕಾರಿ ಉಷಾ, ಸೆಸ್ಕ್ ಕಿರಿಯ ಅಭಿಯಂತರ ರಂಗಸ್ವಾಮಿ, ಕಂದಾಯ ನಿರೀಕ್ಷಕರು ಗಳಾದ ಬಿ ಪಿ ಮಾದೇಶ್,ಮಹದೇವಸ್ವಾಮಿ ಗ್ರಾಮ ಲೆಕ್ಕಿಗ ಶೇಷಣ್ಣ ಮುಖಂಡರುಗಳಾದ ಅಜ್ಜೀಪುರ ನಾಗರಾಜು ಜೀರಿಗೆಗದ್ದೆ ಚಂದ್ರು ಜಲ್ಲಿಪಾಳ್ಯ ಮಾದೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

2 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

3 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

3 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

3 hours ago