ಮೈಸೂರು : ಮೈಸೂರು ಹಾಗೂ ವೀರಾಜಪೇಟೆ ರಸ್ತೆಗೆ ಹೊಂದಿಕೊಂಡಂತಿರುವ ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆಯನ್ನು ಭೇಟೆಯಾಡಿ ಅದರ 4 ತೊಡೆಗಳು ಹಾಗೂ ಎಡ ದೇಹದ ಭಾಗಗಳನ್ನು ಕತ್ತರಿಸಿಕೊಂಡು ಪರಾರಿಯಾಗಿದ್ದ ಆರೋಪಿಗಳನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು ಕಚುವಿನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ದಿನಾಂಕ 15/10/2022 ರಂದು ರಾತ್ರಿ ಒಟ್ಟು 9 ಜನ ಆರೋಪಿಗಳು ಸೇರಿ ಕಾಟಿಯನ್ನು ಭೇಟೆಯಾಡಿದ್ದರು. ಈ ಸಂಬಂಧ ದೂರು ದಾಖಲಾಗಿದ್ದು ಕಾರ್ಯಾಚರಣೆಯನ್ನು ಕೈಗೊಂಡ ಅಧಿಕಾರಿಗಳಾದ ಉಪಾರಣ್ಯ ಸಂರಕ್ಷಣಾಧಿಕಾರಿ ಡಿ.ಎಸ್ ದಯಾನಂದ ಅವರ ಮಾರ್ಗದರ್ಶನದೊಂದಿಗೆ ಹುಣಸೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ರತನ್ ಕುಮಾರ್ ಹಾಗೂ ಆನೆ ಚೌಕೂರು ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳಾದ ಗಣರಾಜ ಪಟಗಾರ ಹಾಗೂ ಹುಣಸೂರು ವನ್ಯಜೀವಿ ವಲಯದ ಸಿಬ್ಬಂದಿಗಳು ವಿಶೇಷ ಹುಲಿ ಸಂರಕ್ಷಣಾ ಪಡೆಯ ಸಿಬ್ಬಂದಿಗಳೊಂದಿಗೆ ತನಿಖೆ ಕೈಗೊಂಡು ಘಟನೆಯ ಸಂಬಂಧ ಇಬ್ಬರು ಆರೋಪಿಗಳಾದ ಚಂದ್ರ ಅಲಿಯಾಸ್ ಕಾಟಿ ಚಂದ್ರ, ಅಶೋಕ್ ಲಕ್ಷಮೀಪುರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಉಳಿದ 7 ಜನ ಆರೋಪಿಗಳಾದ ಮನು,ಬೊಮ್ಮ, ಭರತ್, ಆನಂದ್, ಶೇಷಮ್ಮನ ಜಯ, ರಾಮಕೃಷ್ಣೆಗೌಡ, ಮಂಜು ಇವರುಗಳನ್ನು ಬಂಧಿಸಲು ಪ್ರಯತ್ನದಲ್ಲಿ ತೊಡಗಿದ್ದಾರೆ.
ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ. ಈ ಹಿಂದೆ…
ಮಂಡ್ಯ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಜಿಲ್ಲೆಯಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು ಎಂದು…
ಮಂಡ್ಯ: ಮನೆ ಬಾಗಿಲಿಗೆ ಸರ್ಕಾರಿ ಸೇವೆ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದರು. ಮಂಡ್ಯ ತಾಲ್ಲೂಕಿನ…
ಮೈಸೂರು: ದಲಿತರೇ ಸಿಎಂ ಆಗಿದ್ದರೂ ಸಿದ್ದರಾಮಯ್ಯ ಅವರಷ್ಟು ದಲಿತರಿಗೆ ಕಾರ್ಯಕ್ರಮ ಕೊಡುತ್ತಿರಲಿಲ್ಲ ಎಂದು ಪರಿಷತ್ ಸದಸ್ಯ ಕೆ.ಶಿವಕುಮಾರ್ ಸಿಎಂ ಸಿದ್ದರಾಮಯ್ಯರನ್ನು…
ಮೈಸೂರು: ವೈಚಾರಿಕ, ವೈಜ್ಞಾನಿಕ ಶಿಕ್ಷಣ ಪಡೆಯದಿದ್ದರೆ ನಾವೆಲ್ಲಾ ಮೌಡ್ಯಕ್ಕೆ ದಾಸರಾಗುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾನಸ…
ಮೈಸೂರು: 2028ರವರೆಗೂ ಸಿದ್ದರಾಮಯ್ಯ ತಮ್ಮ ಅವಧಿಯನ್ನು ಪೂರೈಸಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು…