ಮಲ್ಕುಂಡಿ: ಈ ಬಾರಿ ನಂಜನಗೂಡು ವಿಧಾನ ಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಹೆಚ್.ಸಿ.ಮಹದೇವಪ್ಪ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕೆಂದು ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತರಗನಹಳ್ಳಿ ನಂಜುಂಡಸ್ವಾಮಿ ಒತ್ತಾಯಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮಹದೇವಪ್ಪ ಅವರು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದಾಗ ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು ಪ್ರತಿ ಗ್ರಾಮಗಳಿಗೂ ಕಾಂಕ್ರೀಟ್ ರಸ್ತೆ, 123 ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ರೈತರ ಪರವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಸಮಿಶ್ರ ಸರ್ಕಾರ ಇದ್ದಾಗ ನುಗು ಏತ ನೀರಾವರಿ ಯೋಜನೆಗೆ 80 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ಅವರೇ ಮೊದಲು ಕಾರಣ. ವೀರಶೈವ ಸಮುದಾಯ ನಿರ್ಮಾಣಕ್ಕೆ ಜಾಗ ಹಾಗೂ 2 ಕೋಟಿ ರೂ. ಅನುದಾನ ನೀಡಿದ್ದಾರೆ. ಎಲ್ಲಾ ಸಮುದಾಯದ ಜನರ ಜೊತೆ ಪ್ರೀತಿ ಗಳಿಸಿದ್ದಾರೆ. ಆದ್ದರಿಂದ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಡಾ.ಹೆಚ್.ಸಿ.ಮಹದೇವಪ್ಪ ಗೆಲುವು ಖಚಿತವಾಗಿದ್ದು, ಅವರಿಗೆ ಕಾಂಗ್ರೆಸ್ ಪಕ್ಷದ ವರಿಷ್ಠರು ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…