ಜಿಲ್ಲೆಗಳು

ಮೆದುಳು ನಿಷ್ಕ್ರಿಯ : ನಾಲ್ವರ ಬದುಕಿಗೆ ಬೆಳಕಾದ ಯುವಕ

ಮೈಸೂರು: ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿರುವ ಪೊಷಕರು ನಾಲ್ವರಿಗೆ ಜೀವದಾನ ಮಾಡಿದ್ದಾರೆ. ಮೈಸೂರಿನ ಹೆಬ್ಬಾಳಿನ ನಿವಾಸಿ, ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದ ಜೆ.ಮನೋಜ್ (26) ಅವರು ಅ.16ರಂದು ಮೈಸೂರಿನ ಜೆ.ಸಿ.ನಗರದ ಬಳಿ ಅಪಘಾತಕ್ಕೀಡಾಗಿದ್ದರು.

ಅ.17ರಂದು ಇವರನ್ನು ಅಪೋಲೋ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದರಿಂದ ಎರಡು ದಿನಗಳ ಕಾಲ ವೈದ್ಯಕೀಯ ನಿಗಾದಲ್ಲಿರಿಸಲಾಗಿತ್ತು. ಅ.20ರ ಬೆಳಗ್ಗೆ ಮಾನವ ಅಂಗಾಂಗ ಕಸಿ ಕಾಯ್ದೆಯ ಪ್ರಕಾರ, ಆಸ್ಪತ್ರೆಯ ವೈದ್ಯರು ಬ್ರೈನ್ ಡೆಡ್ ಎಂದು ಘೋಷಿಸಿದ್ದರು. ನಂತರ ಹಲವಾರು ಪರೀಕ್ಷೆಗಳಿಂದ ಅವರು ಅಂಗಾಂಗ ದಾನಕ್ಕೆ ಅರ್ಹರು ಎಂದು ಖಚಿತಪಡಿಸಲಾಗಿತ್ತು. ಮನೋಜ್ ಪೋಷಕರಾದ ಜಯಶಂಕರ್ ಮತ್ತು ಜಯಲಕ್ಷ್ಮಿ ಅವರಿಗೆ ಅಂಗಾಂಗ ದಾನದ ಬಗ್ಗೆ ಸಲಹೆ ನೀಡಿದಾಗ, ಪೋಷಕರು ಒಪ್ಪಿಗೆ ಸೂಚಿಸಿದ್ದರು.ಮನೋಜ್ ಅಂಗಗಳನ್ನು (ಹೃದಯ ಕವಾಟಗಳು, ಒಂದು ಮೂತ್ರಪಿಂಡ, ಯಕೃತ್ತು ಕಾರ್ನಿಯಾಗಳನ್ನು) ಕಸಿ ಮಾಡಲಾಗಿದೆ. ಹೃದಯ ಕವಾಟಗಳನ್ನು ಬೆಂಗಳೂರಿನ ಶ್ರೀ ಜಯದೇವ ಆಸ್ಪತ್ರೆ, ಲಿವರ್ ಹಾಗೂ ಬಲ ಕಿಡ್ನಿಯನ್ನು ಮೈಸೂರಿನ ಅಪೋಲೋ ಬಿಜಿಎಸ್ ಆಸ್ಪತ್ರೆ, ಕಾರ್ನಿಯಾಗಳನ್ನು ಮೈಸೂರಿನ ಜೆಎಸ್​ಎಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

andolanait

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

13 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

13 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

15 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

17 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

20 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

20 hours ago