ಮಡಿಕೇರಿ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಅಮಾಯಕ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿದ ಆರೋಪದಡಿ ಓರ್ವ ಆರೋಪಿಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕೇರಳ ರಾಜ್ಯ ಕಾಸರಗೋಡು ಮೂಲದ ಆರೋಪಿ ಎಂ.ಹೆಚ್. ಶ್ರೀನಾಥ್(೪೫) ಬಂಧಿತ ಆರೋಪಿ.
ಮಡಿಕೇರಿ ತಾಲ್ಲೂಕು ಸಂಪಾಜೆ ಹೋಬಳಿ ಬಾಲಂಬಿ ಗ್ರಾಮ, ಎಂ.ಚೆಂಬು ನಿವಾಸಿ ಜೇಮ್ಸ್ ಜೋಸೆಫ್(೨೪) ಎಂಬುವವರಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ ೪ ಲಕ್ಷ ರೂ.ಗಳ ಬೇಡಿಕೆ ಇಟ್ಟಿದ್ದ ಶ್ರೀನಾಥ್, ಮುಂಗಡವಾಗಿ ೧.೫೦ ಲಕ್ಷ ರೂ.ಗಳನ್ನು ೨೦೨೧ ರಲ್ಲಿ ಪಡೆದಿದ್ದ ಎನ್ನಲಾಗಿದೆ. ಆದರೆ ಹಣ ನೀಡಿ ವರ್ಷ ತುಂಬುತ್ತಾ ಬಂದರೂ ವಿಸಾ ಮತ್ತು ಉದ್ಯೋಗ ಸಿಗದೆ ಇದ್ದಾಗ ಸಂಶಯಗೊಂಡ ಜೇಮ್ಸ್, ವಿಚಾರಿಸಿದರೂ ಸಮರ್ಪಕ ಮಾಹಿತಿ ನೀಡದ ಹಿನ್ನೆಲೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ತನಿಖೆ ಕೈಗೊಂಡ ಪೊಲೀಸರು ಶ್ರೀನಾಥ್‌ನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದರು. ತನಿಖೆ ವೇಳೆ ೪೦ಕ್ಕೂ ಹೆಚ್ಚು ಯುವಕರಿಗೆ ಈತ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ್ದಾನೆ ಎಂದು ತಿಳಿದು ಬಂದಿದ್ದು, ವಂಚನೆಗೊಳಗಾದ ಕೆಲವರು ಪೊಲೀಸ್ ಠಾಣೆಗೆ ಬಂದು ಅಳಲು ತೋಡಿಕೊಂಡಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…