ಹನೂರು: ರಾಜ್ಯದ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿರುವ ಅರಣ್ಯ ಆಧಾರಿತ 9 ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿ ವೇದಿಕೆ ಕಾರ್ಯದರ್ಶಿ ಮುತ್ತಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಜಸ್ಟಿಸ್ ನಾಗಮೋಹನ್ ದಾಸ್ ರವರ ವರದಿಯ ಶಿಫಾರಸ್ಸಿನಂತೆ ಸರ್ಕಾರ ಎಸ್ಸಿ ಸಮುದಾಯಕ್ಕೆ 15 ರಿಂದ 17 ಹಾಗೂ ಎಸ್ ಟಿ ಸಮುದಾಯಕ್ಕೆ ಶೇಕಡಾ 3ರಿಂದ 7.5ರ ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಳ ಮಾಡಲು ಕ್ಯಾಬಿನೆಟ್ ನಲ್ಲಿ ನಿರ್ಣಯ ಕೈಗೊಂಡಿದೆ.
ಸರಕಾರ ಅಂಕಿ ಅಂಶಗಳ ಪ್ರಕಾರ ಪ್ರಸ್ತುತ ರಾಜ್ಯದಲ್ಲಿ 50 ಸಮುದಾಯಗಳ 42 ಲಕ್ಷ ಜನಸಂಖ್ಯೆ ಪರಿಶಿಷ್ಟ ವರ್ಗಗಳ ಅಡಿಯಲ್ಲಿ ಗುರುತಿಸಿದ್ದು ಇದುವರೆವಿಗೂ 60 ವರ್ಷಗಳ ಹಿಂದೆ ಪಟ್ಟಿಯಲ್ಲಿ ದ್ದ ಸೀಮಿತ ಸಮುದಾಯಗಳಿಗೆ ನಿಗದಿಯಾಗಿದ್ದ ಶೇ,3 ರಷ್ಟು ಮೀಸಲಾತಿಯ ನ್ನೇ ಹಂಚಿಕೆ ಮಾಡಿಕೊಳ್ಳುತ್ತಿದ್ದವು.
ಇದರಿಂದ ಅರಣ್ಯ ಆಧಾರಿತ 10 ರಿಂದ 12 ಸಮುದಾಯಗಳ 8 ರಿಂದ 12 ಲಕ್ಷ ಜನಸಂಖ್ಯೆ ಆದಿವಾಸಿಗಳು S T ಪಟ್ಟಿಯಲ್ಲಿರುವ ಇತರ ಸಮುದಾಯಗಳ ಜೊತೆ ಶಿಕ್ಷಣ, ಉದ್ಯೋಗ,ಆರೋಗ್ಯ,ಅಭಿವೃದ್ದಿ ಯೋಜನೆ ಗಳ ಪ್ರಯೋಜನ ಪಡೆಯಲು ದಿನನಿತ್ಯ ನಿರಂತರ ಸೆಣಸಾಟ ನಡೆಸಬೇಕಾದ ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿದೆ.
ಸರಕಾರ ಮೀಸಲಾತಿ ಹೆಚ್ಚಳ ಮಾಡಲು ನಾಗಮೋಹ ನ್ ದಾಸ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚನೆ ಮಾಡಿದ ನಂತರ ಆಯೋಗವು ನಡೆಸಿದ ರಾಜ್ಯ,ವಿಭಾಗ ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಮ್ಮ ಆದಿವಾಸಿ ವೇದಿಕೆ ವತಿಯಿಂದ ಅರಣ್ಯ ಆಧಾರಿತ ಸಮುದಾಯಗಳಿಗೆ ಈ ಹಿಂದೆ ನಿಗದಿಯಾಗಿದ್ದ ಶೇ 3 ರ ಮೀಸಲಾತಿಯನ್ನು ಎಂದಿನಂತೆ ಮುಂದುವರಿಸಬೇಕು ಜೊತೆಗೆ ಅರಣ್ಯ ಆಧಾರಿತ ಆದಿವಾಸಿ ಸಮುದಾಯಗಳಿಗೆ ಪ್ರತ್ಯೇಕ ಒಳ ಮೀಸಲು ಕಲ್ಪಿಸುವಂತೆ ಒತ್ತಾಯಿಸಿದ್ದಾರೆ .
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…