ಹನೂರು : ವ್ಯಕ್ತಿಯೋರ್ವನಿಗೆ ಕಾಡಾನೆ ದಾಳಿ ಮಾಡಿದ ಪರಿಣಾಮ ಕೈ,ಕಾಲು ಮುರಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಭಾನುವಾರ ಸಂಜೆ ಜರುಗಿದೆ.
ತಾಲೂಕಿನ ಹುತ್ತೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕತ್ತೆಕಾಲುಪೊಡು ಗ್ರಾಮದ ನಿವಾಸಿ ಮಾದೇಶ್(45) ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಘಟನೆಯ ವಿವರ : ಬೈಲೂರು ಅರಣ್ಯ ಪ್ರದೇಶ ಸಮೀಪದ ಜಮೀನಿನಲ್ಲಿದ್ದ ಕಣ್ಣು ಕಾಣದ ವ್ಯಕ್ತಿಯೋರ್ವನ ಮೇಲೆ ಭಾನುವಾರ ಮಧ್ಯಾಹ್ನ 3:00 ಸಮಯದಲ್ಲಿ ದಾಳಿ ಮಾಡಿದೆ, ಪರಿಣಾಮ ವ್ಯಕ್ತಿಯ ಕೈ ಹಾಗೂ ಕಾಲು ಮುರಿದಿದೆ. ಜಮೀನಿನಲ್ಲಿ ಘಟನೆ ನಡೆದಿದ್ದರಿಂದ ವಿಚಾರ ಮನೆಯವರಿಗೆ ತಿಳಿದಿಲ್ಲ ನಂತರ ಮೇವು ಮೆಯಿಸಲು ತೆರಳಿದ ದನಗಾಯಿ ಯುವಕರಿಂದ ಮಾಹಿತಿ ಪಡೆದುಕೊಂಡ ಕುಟುಂಬಸ್ಥರು ಗ್ರಾಮ ಪಂಚಾಯಿತಿ ಸದಸ್ಯ ನಿಂಗಯ್ಯ ಹಾಗೂ ಅರಣ್ಯ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸಹಕಾರದಿಂದ ಅರಣ್ಯ ಇಲಾಖೆಯ ವಾಹನದ ಮೂಲಕ ಪಿಜಿ ಪಾಳ್ಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದ ಹಿನ್ನೆಲೆ ಚಾಮರಾಜನಗರ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್ ಮೂಲಕ ದಾಖಲು ಮಾಡಿದ್ದಾರೆ.
ಸಾರ್ವಜನಿಕರಿಂದ ಆಕ್ರೋಶ : ಪಿ ಜಿ ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ವಾಹನವಿದ್ದರೂ ಸಹ ಖಾಯಂ ಚಾಲಕನನ್ನು ನೇಮಕ ಮಾಡದೆ ಇರುವ ಪರಿಣಾಮ ಪದೇ ಪದೇ ರೋಗಿಗಳು ತೊಂದರೆ ಅನುಭವಿಸಬೇಕಾಗಿದೆ. ಗಾಯಗೊಂಡಿದ್ದ ವ್ಯಕ್ತಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಸಹ ಚಾಲಕನಿಲ್ಲದೆ ತೊಂದರೆಗೊಳಗಾಗಿ ಪ್ರತಿಭಟನೆ ನಡೆಸಲಾಗಿತ್ತು. ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ, ಖಾಯಂಚಾಲಕನನ್ನು ನೇಮಕ ಮಾಡದಿದ್ದರೆ ಗ್ರಾಮಸ್ಥರು ಹಾಗೂ ಪ್ರಜ್ಞಾವಂತ ನಾಗರಿಕರೆಲ್ಲರೂ ಸೇರಿ ಉಗ್ರ ಪ್ರತಿಭಟನೆ ಮಾಡುವುದಾಗಿ ಅರಣ್ಯ ಸಮಿತಿ ಅಧ್ಯಕ್ಷ ಎನ್ ಕೃಷ್ಣಮೂರ್ತಿ ಎಚ್ಚರಿಕೆ ನೀಡಿದ್ದಾರೆ.
ಸಮಯಕ್ಕೆ ಸರಿಯಾಗಿ ತುರ್ತು ವಾಹನ ಬಾರದ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಗಿರೀಶ್ ಮತ್ತು ನವೀನ್ ಅರಣ್ಯ ಇಲಾಖೆ ವಾಹನವನ್ನು ನೀಡಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ೨೦೨೬ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು…
ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ೩೦ ಡಿ.ಸೆ. ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ಹೆಚ್ಚಾಗಿರುವ ಮಾಗಿ ಚಳಿಯ ವಾತಾವರಣಕ್ಕೆ ಜನರು…
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ…
ಮೈಸೂರು : NFHS-5 ವರದಿಯ ಪ್ರಕಾರ ಮೈಸೂರು ಜಿಲ್ಲೆಯ SAM ಮಕ್ಕಳ ಪ್ರಮಾಣ 7.2% ಇದ್ದು ಪ್ರಸ್ತುತ 0.21% ಗೆ…
ಮೈಸೂರು : ರಾಜ್ಯದಲ್ಲಿ ನಾಯಕತ್ವ, ಅಧಿಕಾರ ಹಂಚಿಕೆ ಕಿತ್ತಾಟ ಬಿಟ್ಟು ರಾಜ್ಯದ ಸರ್ವತೋಮುಖ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಲಿ ಎಂದು…