ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.
ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…