ಜಿಲ್ಲೆಗಳು

ಅರಣ್ಯ ರಕ್ಷಣೆಗೆ ಸಾರ್ವಜನಿಕರು ಸಹಕಾರ ನೀಡಲಿ : ನ್ಯಾ. ಬಿ.ಎಸ್.ಭಾರತಿ ಸಲಹೆ

ಚಾಮರಾಜನಗರ: ಅರಣ್ಯ ಸಂರಕ್ಷಣೆಗಾಗಿ ಕಷ್ಟ ಪಡುವ ಅರಣ್ಯ ಇಲಾಖೆಯ ಸಿಬ್ಬಂದಿ ಜೊತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ಭಾರತಿ ಅವರು ಸಲಹೆ ನೀಡಿದರು.

ನಗರದ ಅರಣ್ಯ ಸಸ್ಯಕ್ಷೇತ್ರದಲ್ಲಿ ಅರಣ್ಯ ಇಲಾಖೆಯಿಂದ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿದ ನಂತರ ಮಾತನಾಡಿದರು.
ವನ್ಯಸಂಪತ್ತು ಉಳಿಸಲು ಕೆಲವು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವರು ಪ್ರಾಣಿಗಳಿಂದ ದಾಳಿಗೆ ಒಳಗಾಗಿದ್ದಾರೆ ಅಲ್ಲದೆ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ. ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಆಗಿದ್ದ ಶ್ರೀನಿವಾಸ್, ಡಿವೈಎಸ್ಪಿ ಹರೀಶಕುಮಾರ್ ಹತ್ಯೆಯಾಗಿದ್ದಾರೆ. ರಾಮಾಪುರ ಪೊಲೀಸ್ ಠಾಣೆ ಮೇಲೆಯೂ ದಾಳಿ ಮಾಡಿದ್ದ ಎಂಬುದನ್ನು ಅರಣ್ಯಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ಧಾರೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಡಿಎಫ್‌ಒ ಡಾ.ಸಂತೋಷಕುಮಾರ್ ಅವರು, ಕಾಡುಗಳ್ಳ ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ನ.೧೧ ರಂದು ಹತ್ಯೆಯಾದರು. ಆ ದಿನವನ್ನು ಕರ್ನಾಟಕ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿತ್ತು. ರಾಜಸ್ತಾನದಲ್ಲಿ ರಾಜನೊಬ್ಬ ಅರಣ್ಯ ರಕ್ಷಣೆಗೆ ಮುಂದಾಗಿದ್ದ ಬಿಷ್ಣೊಯಿ ಸಮುದಾಯವನ್ನು ಸೆ.೧೧ರಂದು ಸಾಮೂಹಿಕವಾಗಿ ಹತ್ಯೆ ಮಾಡಿಸಿದ್ದ. ಆ ದಿನವನ್ನು ಕೇಂದ್ರ ಸರ್ಕಾರ ಅರಣ್ಯ ಹುತಾತ್ಮರ ದಿನವಾಗಿ ಆಚರಿಸುತ್ತಿದೆ. ಅಂದಿನಿAದ ದೇಶಾದ್ಯಂತ ಸೆ.೧೧ ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ವೀರಪ್ಪನ್‌ನಿಂದ ಡಿಸಿಎಫ್ ಶ್ರೀನಿವಾಸ್ ೧೯೯೧ರ ನ.೧೦ ರಂದು ಹತ್ಯೆಯಾದರು. ಅವರ ಕಾರ್ಯದಕ್ಷತೆಯನ್ನು ಮೆಚ್ಚಿ ಕೀರ್ತಿಚಕ್ರ ಪುರಸ್ಕಾರ ನೀಡಿ ಗೌರವಿಸಲಾಯಿತು. ಕಳೆದ ೫೪ ವರ್ಷಗಳಲ್ಲಿ ಅರಣ್ಯ ಸಂರಕ್ಷಣೆಗಾಗಿ ಹೋರಾಡುವಾಗ ಮೃತರಾದ ಅರಣ್ಯ ಇಲಾಖೆಯ ಸಿಬ್ಬಂದಿ, ನೌಕರರ ಸೇವೆ ಸ್ಮರಿಸಿ ಶ್ರದ್ದಾಂಜಲಿ ಸಲ್ಲಿಸಲು ಈ ಹುತಾತ್ಮರ ದಿನ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲೆಯ ಅರಣ್ಯಗಳಲ್ಲಿ ಸೇವೆ ಸಲ್ಲಿಸುವಾಗ ಮೃತರಾದ ಮಾದನಾಯಕ, ಜೋಗೆಗೌಡ, ಅಬ್ದುಲ್ ಅಹಮ್ಮದ್, ಅಹಮ್ಮದ್ ಖಾನ್, ಹುಚ್ಚಶೆಟ್ಟಿ, ಜಿ.ಕೆ.ಅಣ್ಣಯ್ಯ, ಮುರುಗಪ್ಪ, ಪಿ.ಶ್ರೀನಿವಾಸ್ ಸೇರಿದಂತೆ ರಾಜ್ಯದ ೫೪ ನೌಕರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಮಾಜಿಕ ವಲಯ ಅರಣ್ಯದ ಡಿಸಿಎಫ್ ಡಿ.ವೈ.ರಾಜು, ಎಸಿಎಫ್‌ಗಳಾದ ಕೆ.ಸುರೇಶ್, ಮಹದೇವಯ್ಯ, ಸಭ್ಯಶ್ರೀ ಇತರರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುಚ್ಚವಿರಿಸಿ ಗೌರವ ಸಲ್ಲಿಸಿದರು. ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

andolanait

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

5 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

6 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

7 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

7 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

10 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

11 hours ago