ಜಿಲ್ಲೆಗಳು

ನ್ಯಾಯ ಕೇಳಿದ್ದಕ್ಕೆ ಕೊಲೆಯಾಗಿ ಹೋದರೇ ಮಾಜಿ ಐಬಿ ಅಧಿಕಾರಿ ?

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ

ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನ್ಯಾಯ ಕೇಳಿದ್ದಕ್ಕೆ ಕುಲಕರ್ಣಿ ಅವರ ಕೊಲೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಶಾರದಾದೇವಿನಗರದ ನಿವಾಸಿ ಕುಲಕರ್ಣಿ ಅವರು ನಿತ್ಯದಂತೆ ವಾಕ್ ಮಾಡಲು ನ.4ರಂದು ಸಂಜೆ 5 ಗಂಟೆ ಮನೆಯನ್ನು ಬಿಟ್ಟಿದ್ದು, ಕಾರು ಚಾಲಕನೊಂದಿಗೆ ಮಾನಸಗಂಗೋತ್ರಿ ಕ್ಯಾಂಪಸ್ಗೆ ಬಂದಿದ್ದಾರೆ. ಮಾಮೂಲಿಯಂತೆ ಕಾರನ್ನು ನಿಲ್ಲಿಸಿ, ಚಾಲಕನನ್ನು ಕಾರಿನ ಬಳಿಯೇ ಇರಲು ಹೇಳಿ. ವಾಕ್ ಮಾಡಲು ಹೋಗಿದ್ದಾರೆ. ಹೀಗೆ ವಾಕ್ ಮಾಡುತ್ತಾ, ಕ್ಯಾಂಪಸಿನ ಬಯೋ ಟೆಕ್ನಾಲಜಿ ಡಿಪಾರ್ಟ್ಮೆಂಟ್ ಬಳಿ ಹೋಗುವಾಗ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿದೆ. ಕ್ಯಾಂಪಸ್ನಲ್ಲಿದ್ದ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ನೋಂದಣಿ ಸಂಖ್ಯೆ ಇಲ್ಲದ ಕಾರು ಡಿಕ್ಕಿ ಹೊಡೆದು ಪರಾರಿಯಾಗಿರುವುದು ಕಂಡು ಬಂದಿದೆ. ತಕ್ಷಣ ಆಸ್ಪತ್ರೆಗೆ ಸೇರಿದಾಗ್ಯೂ ತಲೆಗೆ ತೀವ್ರವಾದ ಪೆಟ್ಟಾದ ಕಾರಣ ಅವರು ಮೃತಪಟ್ಟಿದ್ದಾರೆ.

ಡ್ರೈವರ್ ಹೇಳಿಕೆ : ‘ಕುಲಕರ್ಣಿ ಅವರು ಗಂಗೋತ್ರಿ ಕ್ಯಾಂಪಸ್ನಲ್ಲಿ ವಾಯು ವಿಹಾರ ಮಾಡುತ್ತಿದ್ದಾಗ ನಾನು ಎಂದಿನಂತೆ ಒಂದು ಜಾಗದಲ್ಲಿ ಕಾರು ನಿಲ್ಲಿಸಿಕೊಂಡು ಕಾಯುತ್ತಿದ್ದೆ. ಆದರೆ ಸುಮಾರು ಸಂಜೆ ೫.೪೫ರ ವೇಳೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಯಾರೋ ಒಬ್ಬರು ನೀವು ನಿತ್ಯ ಕರೆದುಕೊಂಡು ಬರುತ್ತಿದ್ದ ವ್ಯಕ್ತಿಗೆ ಯಾವುದೋ ವಾಹನ ಗುದ್ದಿಕೊಂಡು ಹೋಗಿದೆ ಎಂದು ತಿಳಿಸಿದರು. ನಾನು ತಕ್ಷಣ ಅವರನ್ನು ಕಾಮಾಕ್ಷಿ ಆಸ್ಪತ್ರೆಗೆ ಆಸ್ಪತ್ರೆಗೆ ಸೇರಿಸಿ, ನಂತರ ಸಂಜೆ 6.31ಕ್ಕೆ ಅವರ ಅಳಿಯನಿಗೆ ಕರೆ ಮಾಡಿ ವಿಷಯ ತಿಳಿಸಿರುವುದಾಗಿ ಚಾಲಕ ನಿಂಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನ್ಯಾಯ ಕೇಳಿದ್ದಕ್ಕೆ ಕೊಲೆಯಾದ್ರಾ ?

‘ಕುಲಕರ್ಣಿ ಅವರ ಮನೆಯ ಬಳಿ ಸ್ವಲ್ಪವೂ ಅಂತರ ಬಿಡದೆ ಮಾದಪ್ಪ ಎಂಬವರು ಕಾನೂನು ಬಾಹಿರವಾಗಿ ಮತ್ತು ಮಹಾನಗರ ಪಾಲಿಕೆ ಬೈಲಾದ ವಿರುದ್ಧವಾಗಿ ಮನೆ ಕಟ್ಟಿದ್ದರು. ಮನೆಯನ್ನು ಕಟ್ಟುವ ಹಂತದಲ್ಲಿಯೇ ಜಾಗ ಬಿಡುವಂತೆ ಕುಲಕರ್ಣಿ ಅವರು ಮಾದಪ್ಪನವರನ್ನು ಕೇಳಿದ್ದರು. ಆದರೆ, ಈ ಕೋರಿಕೆಯನ್ನು ಮಾದಪ್ಪ ತಿರಸ್ಕರಿಸಿದ್ದರು. ಹೀಗಾಗಿ, ಕಾನೂನು ಬಾಹಿರವಾಗಿ ಮನೆಯನ್ನು ನಿರ್ಮಾಣ ಮಾಡಿದ ಮಾದಪ್ಪ ಅವರ ವಿರುದ್ಧ ಆರ್.ಎನ್.ಕುಲಕರ್ಣಿ ಅವರು ಕಾನೂನು ಹೋರಾಟ ಆರಂಭಿಸಿದ್ದರು. ನ.2ರಂದು ಮಾದಪ್ಪ ಕಾನೂನು ಬಾಹಿರವಾಗಿ ಮನೆ ಕಟ್ಟಿರುವುದನ್ನು ತೆರವುಗೊಳಿಸುವಂತೆ ಕೋರ್ಟ್ ಆದೇಶ ಮಾಡಿತ್ತು’

‘ಇನ್ನು ಕಾನೂನು ಹೋರಾಟವನ್ನು ಆರಂಭಿಸಿದ್ದಾಗಿನಿಂದ ಮಾದಪ್ಪ ಮತ್ತು ಅವರ ಮಕ್ಕಳು, ಸಹಚರರು ನನ್ನನ್ನು ಹತ್ಯೆ ಮಾಡಲು ಸಂಚು ಮಾಡುತ್ತಿದೆ’ ಎಂದು ಕುಲಕರ್ಣಿ ಅವರು ಅಮೇರಿಕಾದಲ್ಲಿ ಇದ್ದ ತಮ್ಮ ಮಗಳು ಮತ್ತು ಅಳಿಯನ ಜೊತೆಗೆ ಹೇಳಿಕೊಂಡಿದ್ದರು. ಮಗಳು ಮತ್ತು ಅಳಿಯನ ಸಲಹೆ ಮೇರೆಗೆ ಕೊಲೆ ಮಾಡಲು ಪಯತ್ನಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಠಾಣೆ, ನಗರ ಪೊಲೀಸ್ ಆಯುಕ್ತರು, ಪ್ರಧಾನ ಮಂತ್ರಿಯವರಿಗೂ ಮಾದಪ್ಪ ಮತ್ತು ಮಕ್ಕಳು ಬಳಸುವ ವಾಹನಗಳ ನಂಬರ್ ಸಮೇತ ದೂರು ನೀಡಿದ್ದರು ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.

ಕೊಲೆ ಉದ್ದೇಶ: ಎಫ್ಐಆರ್ನಲ್ಲಿ ಉಲ್ಲೇಖವಾಗಿರುವ ಅಂಶಗಳು ಮತ್ತು ಸಿಸಿಟಿವಿ ಕ್ಯಾಮೆರಾ ಫೂಟೇಜ್ಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೊಲೆಯ ಉದ್ದೇಶದಿಂದಲೇ ಅಪಘಾತ ಮಾಡಲಾಗಿದೆ ಎಂದು ತನಿಖೆ ಆರಂಭಿಸಿದ್ದಾರೆ. ಮಾದಪ್ಪ ಮತ್ತು ಮಕ್ಕಳ ವಿರುದ್ಧ ಕುಲಕರ್ಣಿ ಅವರ ಅಳಿಯ ಸಂಜಯ ಅಂಗಡಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 302 ಅಡಿ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolana

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

1 hour ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

2 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago