ಮೈಸೂರು: ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಸಂಘಟಿತ ಹೋರಾಟಕ್ಕೆ ಕರ್ನಾಟಕ ಪಾಂತ ರೈತ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ H.R.ನವೀನ್ ಕುಮಾರ್ ಕರೆ ನೀಡಿದರು. ಕರ್ನಾಟಕ ಪ್ರಾಂತ ರೈತ ಸಂಘದ 2ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಮುಂದುವರೆದು ಕೇಂದ್ರ ಸರ್ಕಾರದ ಶ್ರೀಮಂತ ಕಾರ್ಪೋರೆಟ್ ಕಂಪನಿಗಳ ಸಾಲ ಮನ್ನ ಮಾಡುವಲ್ಲಿ ತೋರುವ ಆಸಕ್ತಿಯನ್ನು ರೈತರ ಸಾಲ ಮನ್ನಾ ಮಾಡುವಲ್ಲಿ ಆಸಕ್ತಿ ತೋರುತ್ತಿಲ್ಲಇದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ತೋರಿಸುತ್ತದೆ. ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿ ಮಾಡುತ್ತೇನೆಂದು ಹೇಳಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ರೈತರಿಗೆ ಮೋಸಮಾಡಿ ವರದಿ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಅಫಿಡೇವಿಟ್ ಸಲ್ಲಿಸಿದೆ. ಅಲ್ಲದೆ ಕಾರ್ಪೊರೇಟ್ ಕಂಪನಿಗಳಿ ಅನುಕೂಲ ಮಾಡಿಕೊಡಲು ಕರಾಳ ಕೃಷಿ ಕಾನೂನನ್ನು ತಂದಿತ್ತು ಅದನ್ನು ಧಿರಾದ್ದೋತ ಹೋರಾಟದ ಮೂಲಕ ತಡೆಹಿಡಿಯಲಾಯಿತು. ಆದರೆ ಮೋದಿ ಸರ್ಕಾರ ಪುನಃ ಕರಾಳ ಕಾಯಿದೆಯನ್ನು ತರಲು ಹುನ್ನಾರ ನಡೆಸುತ್ತಿದೆ. ಇದನ್ನು ಹಿಮ್ಮೆಟ್ಟಿಸಲು ಸಂಘಟಿತರಾಗಬೇಕು,ಅಲ್ಲದೆ ಭೂಮಿಗಾಗಿ 50-60 ವರ್ಷಗಳಿಂದ ಸಾಗುವಳಿ ಪತ್ರಕ್ಕೆ ಅರ್ಜಿ ಸಲ್ಲಿಸಿ ಹಕ್ಕು ಪತ್ರಕ್ಕೆ ಕಾಯುತ್ತಿರುವ ರೈತರಿಗೆ ಸಾಗುವಳಿ ಪತ್ರ ನೀಡದೆ,ಕಾನೂನಿನ ನೆಪ ಹೇಳಿ ಸಾಗುವಳಿ ನಿರಾಕರಿಸುತ್ತಿದ್ದಾರೆ. ಆದರೆ ಅದೇ ಸಾಗುವಳಿ ಭೂಮಿಯನ್ನು ಸಂಘ ಸಂಸ್ಥೆಗಳಿಗೆ ನೀಡಲು ಕಂದಾಯ ಸಚಿವರ ನೇತೃತ್ವದಲ್ಲಿ ಸಮಿತಿ ಮಾಡಿ ಖಾಸಗಿ ಸಂಘ ಸಂಸ್ಥೆಗಳಿಗೆ ನೀಡುತ್ತಿದ್ದಾರೆ ಈ ಭೂಗಳ್ಳ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಅಣಿನೆರೆಸಬೇಕಿದೆ ಎಂದರು.
ವೇದಿಕೆಯಲ್ಲಿ ಅಥಿತಿಗಳಾಗಿ CITU ನ ಜಿಲ್ಲಾ ಕಾರ್ಯದರ್ಶಿ ಜಯರಾಂ, ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಕೆ.ಬಸವರಾಜ್, ಜಿಲ್ಲಾ ಕಾರ್ಯದರ್ಶಿ ಜಗದೀಶ್ ಸೂರ‌್ಯ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ನೂರಾಣಿ ಜಿಲ್ಲಾ ಅಧ್ಯಕ್ಷರಾದ ಚಿಕ್ಕಣ್ಣೇಗೌಡ, ಕೆಂಪಯ್ಯ,ಚಂದ್ರಶೇಖರ್ ಮುಂತಾದವರು ಇದ್ದರು. ಇದಕ್ಕೂ ಮುಂಚೆ ರಾಮಸ್ವಾಮಿ ವೃತ್ತದಿಂದ ಬುದ್ದ ವಿಹಾರದ ವರೆಗೆ ಮೆರವಣಿಗೆ ನಡೆಸಲಾಯಿತು.
ಈ ಸಮ್ಮೇಳನದಲ್ಲಿ ನೂತನ ಜಿಲ್ಲಾ ಸಮಿತಿ ರಚಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಚಿಕ್ಕಣ್ಣೇಗೌಡ ಪ್ರಾಧಾನ ಕಾರ್ಯದರ್ಶಿಯಾಗಿ ಜಗದೀಶ್ ಸೂರ‌್ಯ, ಖಜಾಂಚಿಯಾಗಿ ಮರಳಯ್ಯನಕೊಪ್ಪಲು ಚಂದ್ರಶೇಖರ್ ಉ ಪಾಧ್ಯಕ್ಷರಾಗಿ ಕೆ.ಬಸವರಾಜ್,, ಕೆಂಪಯ್ಯ,ನೀರಾಣಿ,ಬಿ.ಎಂ.ಶಿವಣ್ಣ, ಸಹ ಕಾರ್ಯದರ್ಶಿಯಾಗಿ ಪುಟ್ಟರಾಜ, ಸೋಮಶೇಖರ್, ಸ್ವಾಮಿ ಮುಂದಿನ ಮೂರು ವರ್ಷದ ಅವದಿಗೆ ಆಯ್ಕೆಯಾದರು.
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…