ಜಿಲ್ಲೆಗಳು

ರೈತರ ಆತ್ಮಹತ್ಯೆ ಬೇಸಾಯದ ಬದುಕಿನ ತಲ್ಲಣಗಳ ಪ್ರತಿರೂಪ : ರೂಪ ಹಾಸನ

ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ

ಸಾಮ್ರಾಜ್ಯಗಳನ್ನು  ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.

-ಡಾ.ಬಂಜಗೆರೆ ಜಯಪ್ರಕಾಶ್

ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.

ನಗರದ ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್‌ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೃಷಿಯಲ್ಲಿ ರಚನಾತ್ಮಕ, ಕ್ರಿಯಾಶೀಲ ಹಾಗೂ ಪ್ರಕೃತಿಗೆ ಹತ್ತಿರವಾದ ಪ್ರಯೋಗಗಳನ್ನು ಇಂದು ಮಾಡಬೇಕು. ಪ್ರಕೃತಿ ಧರ್ಮವನ್ನು ಅರಿಯಬೇಕು; ಅನುಸರಿಸಬೇಕು. ನಮ್ಮೊಂದಿಗಿರುವ ಜೀವವೈವಿಧ್ಯವನ್ನೂ ತಿಳಿದುಕೊಳ್ಳಬೇಕು. ಪ್ರಾಕೃತಿಕ ಸಂರಚನೆ ಇರುವುದು ನಮಗಾಗಿ ಮಾತ್ರವೇ ಎಂದು ಭಾವಿಸಿದ್ದೇವೆ. ಆದರೆ, ಮನುಷ್ಯನು ಜೀವ ವಿಕಸನ ಪ್ರಕ್ರಿಯೆಯಲ್ಲಿ ಈಚೆಗೆ ಬಂದವರು ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ಮಕ್ಕಳಿಗೆ ಪ್ರಕೃತಿಯ ಬಗ್ಗೆ ಅರ್ಥ ಮಾಡಿಸಬೇಕು. ಇಲ್ಲದಿದ್ದರೆ ಮನುಷ್ಯ ಸಂತತಿಗೆ ಹೆಚ್ಚು ಉಳಿಗಾಲವಿಲ್ಲ ಎಂದರು.
ನಾವಿಂದು ಪರಿಸರದ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ರೈತರ ಆತ್ಮಹತ್ಯೆ ಪ್ರಕರಣಗಳು ಬೇಸಾಯದ ಬದುಕಿನ ತಲ್ಲಣಗಳ ಪ್ರತಿರೂಪವಾಗಿವೆ. ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪತೀತ್ಯವು ಕೃಷಿಯ ಮೇಲೆ ದೊಡ್ಡ ಪರಿಣಾಮ ಬೀರುತ್ತಿದೆ ಎಂದು ತಿಳಿಸಿದರು. ಪ್ರಕೃತಿಗೆ ಹತ್ತಿರವಾದ ನೈಸರ್ಗಿಕ ಮೂಲದ ಕೃಷಿಯನ್ನು ಬೆಂಬಲಿಸುತ್ತೇವೆ ಎಂಬುದನ್ನು ರಾಜಕೀಯ ಪಕ್ಷಗಳು ಪ್ರಣಾಳಿಕೆಯಲ್ಲಿ ತಿಳಿಸಬೇಕು. ಸಾಮುದಾಯಿಕ ಹಾಗೂ ಸಂಘಟನಾತ್ಮಕ ಕೃಷಿ ಪ್ರಜ್ಞೆ ಬೆಳೆಸಬೇಕು. ಎಲ್ಲೆಲ್ಲಿ ಸರ್ಕಾರಿ ಜಾಗ ಲಭ್ಯವಿದೆಯೋ ಅಲ್ಲಿ ‘ಬೆಳಕಿನ ಬೇಸಾಯ’ ಪ್ರಯೋಗಗಳನ್ನು ಮಾಡಬೇಕು. ಇದಕ್ಕೆ ಗ್ರಾಮ ಪಂಚಾಯಿತಿಗಳ ಮೂಲಕ ಸರ್ಕಾರ ಬೆಂಬಲ ನೀಡಬೇಕು. ಇದಕ್ಕೆ ಬೆಳಕು ತೋರುವಲ್ಲಿ ‘ಬೆಳಕಿನ ಬೇಸಾಯ’ ಕೃತಿಯು ಸಹಕಾರಿಯಾಗಿದೆ ಎಂದು ಹೇಳಿದರು.

ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.

ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.

ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.

ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.

 

andolanait

Recent Posts

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

4 hours ago

ಓದುಗರ ಪತ್ರ: ಗಿಡಗಳನ್ನು ನೆಟ್ಟು ಪರಿಸರ ಉಳಿಸಿ

ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…

4 hours ago

ಓದುಗರ ಪತ್ರ: ಹಗಲು ದರೋಡೆ ನಿಲ್ಲಿಸಿ

ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…

4 hours ago

‘ಕೆಡಿ’ ಹಾಡು, ‘ಲವ್ ಮಾಕ್‌ಟೈಲ್ ೩’, ಕಥೆಯ ಆತ್ಮ, ನಿರೂಪಣೆ, ಕೃತಿಸ್ವಾಮ್ಯಗಳ ಸುತ್ತ

ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…

4 hours ago

ಸಮರ್ಪಕ ನಿರ್ವಹಣೆಯಿಲ್ಲದೇ ಸ್ಥಗಿತಗೊಂಡ ಕುಡಿಯುವ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…

4 hours ago

ಭೇರ್ಯ ಗ್ರಾಪಂಗೆ ೨ನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ

ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…

4 hours ago