ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ
ಸಾಮ್ರಾಜ್ಯಗಳನ್ನು ಕಟ್ಟಲು ತಳಹದಿ ಹಾಕಿಕೊಟ್ಟಿರುವುದು ಕೃಷಿ. ಅದನ್ನು ಲಾಭದಾಯಕ ಮಾಡಲು ನಿಸರ್ಗದೊಂದಿಗೆ ನಡೆಯಬೇಕು. ನಿಸರ್ಗದೊಂದಿಗೆ ಅನುಸಂಧಾನ ಮಾಡಬೇಕೇ ಹೊರತು ಅದರೊಂದಿಗೆ ಯುದ್ಧಕ್ಕೆ ಇಳಿಯಬಾರದು.
-ಡಾ.ಬಂಜಗೆರೆ ಜಯಪ್ರಕಾಶ್
ಮೈಸೂರು: ದೇಶದ ಶೇ.೬೦ರಷ್ಟು ಮಂದಿ ತೊಡಗಿರುವ ಕೃಷಿ ಕ್ಷೇತ್ರ ಅವನತಿಯ ಹಾದಿಯಲ್ಲಿರುವ ಧಾರುಣತೆಯನ್ನು ಕಾಣುತ್ತಿದ್ದೇವೆ ಎಂದು ಸಾಹಿತಿ ರೂಪ ಹಾಸನ ಕಳವಳ ವ್ಯಕ್ತಪಡಿಸಿದರು.
ನಗರದ ದಿ ಇನ್‌ಸ್ಟಿಟ್ಯೂಷನ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಅಹರ್ನಿಶಿ ಪ್ರಕಾಶನ ಹೊರತಂದಿರುವ ಟಿ.ಜಿ.ಎಸ್.ಅವಿನಾಶ್ ವಿರಚಿತ ‘ಬೆಳಕಿನ ಬೇಸಾಯ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಚಿಂತಕ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಕೃಷಿಯು ಸುಲಭವಲ್ಲ. ವಿಪರೀತ ತಾಳ್ಮೆ ಮತ್ತು ಶ್ರಮವನ್ನು ಬೇಡುತ್ತದೆ. ಇದಕ್ಕಾಗಿ ದೃಢ ನಿಶ್ಚಯವೂ ಇರಬೇಕಾಗುತ್ತದೆ. ನಾವು ನಿಸರ್ಗದ ಚಕ್ರವರ್ತಿಗಳೂ ಅಲ್ಲ, ಸಾಮ್ರಾಟರೂ ಅಲ್ಲ. ಅದರ ಒಂದು ಭಾಗವಷ್ಟೆ. ಅನ್ನವನ್ನು ಚಿನ್ನ ಮಾಡುವ ದುರಾಸೆ ಸಲ್ಲದು. ಪ್ರಕೃತಿಯಲ್ಲಿರುವ ಎಲ್ಲವನ್ನೂ ದೇವರೆಂದು ಭಾವಿಸಬೇಕು ಎಂದರು.
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ರೈತರು ಬಹಳ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳಿಗೆ ಪರಿಹಾರ ಒದಗಿಸುವ ಕೆಲಸ ನಡೆಯಬೇಕಿದೆ ಎಂದರು.
ಕೃಷಿ ವಿಜ್ಞಾನಿ ಪ್ರಕಾಶ್ ಕಮ್ಮರಡಿ ಮಾತನಾಡಿ, ಬೇಸಾಯದ ಮೇಲೆ ಹಲವು ವಿಷಯಗಳಲ್ಲಿ ಬೆಳಕು ಚೆಲ್ಲುವ ಕೆಲಸವನ್ನು ಬೆಳಕಿನ ಬೇಸಾಯ ಕೃತಿಯು ಮಾಡಿದೆ ಎಂದು ತಿಳಿಸಿದರು.
ಲೇಖಕ ಟಿ.ಜಿ.ಎಸ್.ಅವಿನಾಶ್, ಅಹರ್ನಿಶಿ ಪ್ರಕಾಶನದ ಅಕ್ಷತಾ ಹುಂಚದಕಟ್ಟೆ, ಪತ್ರಕರ್ತ ಡಿ.ಆರ್.ಅಶೋಕ್ ರಾಮ್, ಹಿರಿಯ ಸಾಹಿತಿ ದೇವನೂರ ಮಹಾದೇವ, ಪ್ರೊ.ಸುಮಿತ್ರಾ ಬಾಯಿ ಕಾರ್ಯಕ್ರಮದಲ್ಲಿ ಉಪಸ್ಥಿರಿದ್ದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…