ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಿಟಿಷರ ವಿರುದ್ದ ಹೋರಾಡಿದ ಝಾನ್ಸಿ ರಾಣಿಲಕ್ಮಿ ಬಾಯಿ ಅವರನ್ನು ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಇತಿಹಾಸದಲ್ಲಿ ಬಿಂಬಿಸಲಾಗಿದೆ. ಆದರೆ, ಇವರಿಗೂ ಮೊದಲು ಕಿತ್ತೂರಿನ ರಾಣಿ ಚೆನ್ನಮ್ಮ ಬ್ರಿಟಿಷರನ್ನು ಸೋಲಿಸಿದ್ದರು. ಹಾಗೆಯೇ ದಕ್ಷಿಣ ಭಾರತದ ಇನ್ನು ಹಲವು ನಾಯಕರು ಸ್ವಾತಂತ್ರ್ಯ ಹೋರಾಟ ನಡೆಸಿದ್ದಾರೆ. ಅವರನ್ನೆಲ್ಲ ಇತಿಹಾಸಕಾರರು ಕಡೆಗಣಿಸಿದ್ದಾರೆ ಎಂದರು.
ಉತ್ತರ ಕರ್ನಾಟಕದ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಆಯಾಯ ಪ್ರದೇಶಕ್ಕೆ ಸೀಮಿತ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಇತಿಹಾಸಕಾರರು ಎಂದು ಬಿಂಬಿಸಲಿಲ್ಲ. ಕನ್ನಡಿಗರ ಅಭಿಮಾನ ಶೂನ್ಯತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಯಿತು ಎಂದು ಹೇಳಿದರು.
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…
ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…