ಜಿಲ್ಲೆಗಳು

ದಕ್ಷಿಣ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಕಡೆಗಣನೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ

ಚಾಮರಾಜನಗರ: ಇತಿಹಾಸಕಾರರು ಉತ್ತರ ಭಾರತದ ಸ್ವಾತಂತ್ರ್ಯ ಹೋರಾಟಗಾರರನ್ನು ಮಾತ್ರ ಬಿಂಬಿಸಿ ದಕ್ಷಿಣ ಭಾರತದವರನ್ನು ಆಯಾ ಪ್ರಾಂತ್ಯಕ್ಕೆ ಸೀಮಿತಗೊಳಿಸಿದ್ದಾರೆ ಎಂದು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.
ನಗರದ ಡಾ.ರಾಜಕುಮಾರ್ ಕಲಾ ಮಂದಿರದಲ್ಲಿ ಭಾನುವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಬ್ರಿಟಿಷರ ವಿರುದ್ದ ಹೋರಾಡಿದ ಝಾನ್ಸಿ ರಾಣಿಲಕ್ಮಿ ಬಾಯಿ ಅವರನ್ನು ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಇತಿಹಾಸದಲ್ಲಿ ಬಿಂಬಿಸಲಾಗಿದೆ. ಆದರೆ, ಇವರಿಗೂ ಮೊದಲು ಕಿತ್ತೂರಿನ ರಾಣಿ ಚೆನ್ನಮ್ಮ ಬ್ರಿಟಿಷರನ್ನು ಸೋಲಿಸಿದ್ದರು. ಹಾಗೆಯೇ ದಕ್ಷಿಣ ಭಾರತದ ಇನ್ನು ಹಲವು ನಾಯಕರು ಸ್ವಾತಂತ್ರ್ಯ  ಹೋರಾಟ ನಡೆಸಿದ್ದಾರೆ. ಅವರನ್ನೆಲ್ಲ ಇತಿಹಾಸಕಾರರು ಕಡೆಗಣಿಸಿದ್ದಾರೆ ಎಂದರು.
ಉತ್ತರ ಕರ್ನಾಟಕದ ಹಲವು ಸ್ವಾತಂತ್ರ್ಯ ಹೋರಾಟಗಾರರನ್ನು ಆಯಾಯ ಪ್ರದೇಶಕ್ಕೆ ಸೀಮಿತ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು ಎಂದು ಇತಿಹಾಸಕಾರರು ಎಂದು ಬಿಂಬಿಸಲಿಲ್ಲ. ಕನ್ನಡಿಗರ ಅಭಿಮಾನ ಶೂನ್ಯತೆಯಿಂದ ನಿರ್ಲಕ್ಷ್ಯಕ್ಕೆ ಒಳಗಾಗಬೇಕಾಯಿತು ಎಂದು ಹೇಳಿದರು.

andolanait

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

7 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

19 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

21 hours ago