Mysore
26
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ನಾಳೆಯಿಂದ ರಾಷ್ಟ್ರೀಯ ಔಷಧ ಸಪ್ತಾಹ ಆಚರಣೆ

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ, ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲಯ, ರಾಷ್ಟ್ರೀಯ ಔಷಧ ವಿಜ್ಞಾನ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ನ.೧೪ರಿಂದ ೧೯ರವರೆಗೆ ರಾಷ್ಟ್ರೀಯ ಔಷಧ ಸಪ್ತಾಹ, ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು  ಹಮ್ಮಿಕೊಳ್ಳಲಾಗಿದೆ ಎಂದು ಔಷಧ ತಜ್ಞ ಡಾ.ಕೆ.ಎನ್.ಕೃಷ್ಣ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನ.೧೪ರಂದು ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲುಂದ ರಾಜೇಂದ್ರ ಸಭಾಂಗಣದಲ್ಲಿ ಸಂಸದ ವಿ.ಶ್ರೀನಿವಾಸಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಮಣಿಪಾಲ್ ಆಸ್ಪತ್ರೆ ವೈದ್ಯಕೀಯ ಸೇವೆಗಳ ಮುಖ್ಯಸ್ಥ ಡಾ.ಉಪೇಂದ್ರ ಶೆಣೈ ಮುಂತಾದವರು ಪಾಲ್ಗೊಳ್ಳುವರು ಎಂದು ಹೇಳಿದರು.
ನ.೧೫ರಂದು ಬೆಳಿಗ್ಗೆ ೧೦ ಗಂಟೆಗೆ ಜೆಎಸ್‌ಎಸ್ ಔಷಧ ವಿಜ್ಞಾನ ಮಹಾವಿದ್ಯಾಲುಂದಲ್ಲಿ ರಕ್ತದಾನ ಶಿಬಿರ, ೧೬ರಂದು ಬೆಳಿಗ್ಗೆ ೯ ಗಂಟೆಗೆ ಲಲಿತ ಮಹಲ್, ಬನ್ನಿಮಂಟಪ ಬಡಾವಣೆ, ಆಕಾಶವಾಣಿ ವೃತ್ತದಲ್ಲಿ ಉಚಿತ ಆರೋಗ್ಯ ತಪಾಸಣೆ ನಡೆಸಲಾಗುವುದು. ನ.೧೭ರಂದು ಜೆಎಸ್‌ಎಸ್ ಫಾರ್ಮಸಿ ಕಾಲೇಜು ಆವರಣದಲ್ಲಿ ೬೧ ಸಸಿಗಳನ್ನು ನೆಡಲಾಗುವುದು. ನ.೧೮ರಂದು ಅಂತರ ಕಾಲೇಜು ಮಟ್ಟದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ. ನ.೧೯ರಂದು ಕಾಲೇಜು ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಎನ್. ಮಂಜುನಾಥ್, ಡಾ.ಆರ್.ಎಸ್.ಚಂದನ್ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!