ಜಿಲ್ಲೆಗಳು

ಕಣ್ಣೇಗಾಲ ಗ್ರಾಮದ ಸೇತುವೆ ಮುಳುಗಡೆ

ಚಾಮರಾಜನಗರ : ಸುವರ್ಣಾವತಿ,ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿ ನದಿಗೆ ನೀರು ಹರಿದುಬಿಟ್ಟಿರುವ ಪರಿಣಾಮ ಕೆರೆಕಟ್ಟೆಗಳು ಭರ್ತಿಯಾಗಿದ್ದು,ಚಾಮರಾಜನಗರ ತಾಲ್ಲೂಕಿನ ಕಣ್ಣೇಗಾಲದ ರಸ್ತೆ ಮುಳುಗಡೆಯಾಗಿದೆ. ಕಣ್ಣೇಗಾಲದಿಂದ ಆಲೂರು ಗ್ರಾಮಕ್ಕೆ ತೆರಳುವ ಮಾರ್ಗದ ಸೇತುವೆ ಮಟ್ಟ ನೀರು ಹರಿಯುತ್ತಿದೆ.

ಜಲಾಶಯದಿಂದ ನೀರು ಹರಿದು ಬಿಟ್ಟಿರುವ ಕಾರಣ ರಾತ್ರಿ ವೇಳೆ ಸಂಪೂರ್ಣ ಮುಳುಗಡೆಯಾಗುವ ಕಾರಣ ಸಾರ್ವಜನಿಕರು ಸಂಚರಿಸದಂತೆ ಸೂಚನೆ ನೀಡಲಾಗಿದೆ.

ಗ್ರಾಮದ ತೋಟಗಳು, ಗದ್ದೆಗಳಿಗೆ ಹೋಗದೆ ಹಸು,ಕುರಿಗಳನ್ನು ಜಮೀನಿಗೆ ಮೇಯಿಸಲು ಕರೆದುಕೊಂಡು ಹೋಗದಂತೆ ನೀರಾವರಿ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಸೇತುವೆ ಮಟ್ಟ ನೀರು ಬಂದಿರುವುದರಿಂದ ಗ್ರಾಮಸ್ಥರು ಸೇತುವೆ ಬಳಿ ರಭಸದಿಂದ ನೀರು ಹರಿಯುತ್ತಿರುವುದನ್ನು ನೋಡಿ ಸಂಭ್ರಮಿಸುತ್ತಿದ್ದಾರೆ.ಗ್ರಾಮ ಪಂಚಾಯಿತಿ ಸದಸ್ಯ ಆರ್‌ ಮಾದೇಶ್‌ ಅವರ ಸಮ್ಮುಖದಲ್ಲಿ ಕಾರ್ಯದರ್ಶಿ ಶೇಖರ್‌ ರವರು ಮುನ್ನೆಚ್ಚರಿಕೆ  ಕ್ರಮಗಳನ್ನು ಧ್ವನಿವರ್ಧಕಗಳ ಮೂಲಕ ಪ್ರಕಟಿಸಲಾಯಿತು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

4 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

4 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

4 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

4 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

5 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

5 hours ago