ಚಾಮರಾಜನಗರ: ಪ್ರಸಿದ್ದ ಯಾತ್ರಾಸ್ಥಳವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮುಜರಾಯಿ ಇಲಾಖೆಯು ಅನುಮತಿ ನೀಡದೆ ಅಲೆದಾಡಿಸುತ್ತಿದ್ದಾರೆ ಎಂದು ಮೈಸೂರಿನ ಸಂಜಯ್ ಎಲೆಕ್ಟ್ರಿಕಲ್ ಮಾಲೀಕರಾದ ಆರ್.ಶ್ರೀಪಾಲ್ ದೂರಿದ್ದಾರೆ.
೪ ತಿಂಗಳ ಹಿಂದೆ ಬೆಟ್ಟಕ್ಕೆ ಭೇಟಿ ನೀಡಿದ್ದಾಗ ವಿದ್ಯುತ್ ಸಂಪರ್ಕ ಇಲ್ಲದಿರುವುದು ಕಂಡುಬoತು. ನಾನು ಸಂಪರ್ಕ ಕಲ್ಪಿಸುವ ಹರಕೆ ಹೊತ್ತಿದ್ದೇನೆ. ಆದರೆ, ಸಂಬoಧಿಸಿದವರಿoದ ಅವಕಾಶ ಸಿಗುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬoಧ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕ ಸಿ.ಎಸ್.ನಿರಂಜನಕುಮಾರ್, ಗುಂಡ್ಲುಪೇಟೆ ತಹಸೀಲ್ದಾರ್. ಅರಣ್ಯ ಇಲಾಖೆ, ಸೆಸ್ಕಾಂಗೆ ಮನವಿ ಸಲ್ಲಿಸಿದ್ದೇನೆ. ಸಾಮಗ್ರಿಗಳನ್ನು ನೀಡಿದರೆ ವೆಚ್ಚವನ್ನು ಸ್ವತಃ ನಾನೇ ಭರಿಸಿ ಕೆಲಸ ನಿರ್ವಹಿಸಲಿದ್ದೇನೆ ಎಂದು ಕೋರಿದ್ದೇನೆ ಎಂದರು.
ವಿದ್ಯುತ್ ಲೈನ್ ಅಂದಾಜು ವೆಚ್ಚವು ೩.೧೮ ಲಕ್ಷ ರೂ. ವೆಚ್ಚವಾಗಲಿದೆ. ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ವ್ಯಾಪ್ತಿಗೆ ಬರಲಿದ್ದು, ಆನೆಗಳ ಓಡಾಟವಿದೆ. ಆದ್ದರಿಂದ ಬೆಟ್ಟದ ಮೇಲೆ ಎಲ್‌ಟಿ ಲೈನ್ ಮತ್ತು ಪರಿವರ್ಧಕಗಳನ್ನು ಅಳವಡಿಸಬೇಕಿದೆ. ಈ ಸಾಮಗ್ರಿಗಳು ಸೆಸ್ಕಾಂನಲ್ಲಿ ಲಭ್ಯವಿಲ್ಲ. ಇವುಗಳ ವೆಚ್ಚ ಕಳೆದು ೮.೨೧ ಲಕ್ಷ ರೂ. ಖರ್ಚಾಗಲಿದೆ. ಇದನ್ನು ನಾವು ಭರಿಸಿ ಕೆಲಸ ಮಾಡಲು ಸಿದ್ದರಿದ್ದೇವೆ ಎಂದರು.
ಈ ಬಗ್ಗೆ ಚಾ.ನಗರ ಜಿಲ್ಲಾಧಿಕಾರಿಗಳು ಕ್ರಮ ವಹಿಸುವಂತೆ ಮುಜರಾಯಿ ಇಲಾಖೆಗೆ ಪತ್ರ ಬರೆದಿದ್ದಾರೆ. ಆದರೆ, ಈ ಇಲಾಖೆಯಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಸಂಬoಧಿಸಿದವರು ಅನುಮತಿ ನೀಡಬೇಕೆಂದು ಆಗ್ರಹಿಸಿದರು.
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…