೩೨ ಮಂದಿ ಬಂಧಿಸಿ, ೧೭.೨೪ ಲಕ್ಷ ರೂ. ವಶಪಡಿಸಿಕೊಂಡ ಪೊಲೀಸರು
ಮೈಸೂರು: ನಗರದ ಪ್ರತಿಷ್ಠಿತ ಬಡಾವಣೆಯ ಗ್ಯಾರೇಜ್‌ವೊಂದರ ಹಿಂಭಾಗದ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ವಿಜಯನಗರ ಠಾಣೆ ಮತ್ತು ಸಿಸಿಬಿ ಪೊಲೀಸರು, ಹಣ ಎಣಿಸುವ ಯಂತ್ರವನ್ನು ಪಕ್ಕದಲ್ಲೇ ಇಟ್ಟುಕೊಂಡು ಇಸ್ಪೀಟ್ ಆಡುತ್ತಿದ್ದ ೩೨ ಜನರನ್ನು ಬಂಧಿಸಿ, ೧೭.೨೪ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಹಿನಕಲ್ ಗ್ರಾಮದ ಯಶಸ್ವಿನಿ ಕಲ್ಯಾಣಮಂಟಪದ ಬಳಿಯ ಆದಿತ್ಯ ಬಡಾವಣೆಯ ಗ್ಯಾರೇಜ್ ಹಿಂಭಾಗದ ಕೊಠಡಿಯಲ್ಲಿ ಜೂಜಾಡುತ್ತಿರುವ ಬಗ್ಗೆ ವಿಜಯನಗರ ಠಾಣೆ ಪೊಲೀಸರಿಗೆ ಮಾಹಿತಿ ದೊರೆತಿದೆ. ವಿಜಯನಗರ ಠಾಣೆ ಪೊಲೀಸರು ಮತ್ತು ಸಿಸಿಬಿ ಪೊಲೀಸರು ರಾತ್ರಿ ಜೂಜು ಅಡ್ಡೆಯ ಮೇಲೆ ದಿಢೀರ್ ಜಂಟಿ ಕಾರ್ಯಾಚರಣೆ ನಡೆಸಿ ಜೂಜಾಡುತ್ತಿದ್ದ ೩೨ ಜನರನ್ನು ಬಂಧಿಸಿದರು. ಜೂಜಾಟಕ್ಕೆ ಪಣಕ್ಕಿಡಲಾಗಿದ್ದ ೧೭.೨೪ ಲಕ್ಷ ನಗದು, ಹಣವ ಎಣಿಸುವ ಯಂತ್ರವನ್ನು ವಶಕ್ಕೆ ಪಡೆದುಕೊಂಡು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಗುಂಟಿ, ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎಸಿಪಿ ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಿಜಯನಗರ ಠಾಣೆ ಇನ್‌ಸ್ಪೆಕ್ಟರ್ ಬಿ.ಎಸ್.ರವಿಶಂಕರ್, ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಜಿ.ಶೇಖರ್ ಸೇರಿದಂತೆ ಇನ್ನಿತರ ಸಿಬ್ಬಂದಿ ಪಾಲ್ಗೊಂಡಿದ್ದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…