ಮೈಸೂರು : ಗಾಂಧಿ ಜಯಂತಿ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆಯು ಮೂರನೇ ದಿನವಾದ ಇಂದು ನಂಜನಗೂಡಿನ ಬದನವಾಳು ಖಾದಿ ಮತ್ತು ಗ್ರಾಮೋದ್ಯೋಗ ಕೇಂದ್ರಕ್ಕೆ ಭೇಟಿ ನೀಡಿದ್ದು ಅಲ್ಲಿ ಗಾಂಧಿ ಜಯಂತಿ ಆಚರಣೆ ಮಾಡಲಾಗುತ್ತಿದೆ.
ರಾಹುಲ್ ಗಾಂಧಿಯವರು ಗಾಂಧಿ ಪ್ರತಿಮೆಗೆ ಮಾರ್ಲಾಪಣೆ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ, ವೇಣುಗೋಪಾಲ್ ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಎಚ್.ಮುನಿಯಪ್ಪ, ಡಿ.ಕೆ ಶಿವಕುಮಾರ್ ದೇರಿದಂತೆ ಹಲವು ಕೈ ನಾಯಕರು ಭಾಗಿಯಾಗಿದ್ದರು.
ಚರಕ ಮತ್ತು ಮಗ್ಗದಿಂದ ತಯಾರಗುವ ಉಪ್ಪನ್ನಗಳನ್ನ ವೀಕ್ಷಿಸಿದ ರಾಹುಲ್ ಗಾಂಧಿ ವೀಕ್ಷಣೆ ಮಾಡಿದರು.ಧಾರವನ್ನ ಹೇಗೆ ಹಾಕುವುದು, ಯಂತ್ರಗಳು ಹೇಗಿದೆ ಎಂಬುದರ ಬಗ್ಗೆ ಕೆಲಸ ಮಾಡುವ ಮಹಿಳೆಯರ ಜೊತೆ ಚೆರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಹಿಳೆ ಒಬ್ಬರು ರಾಹುಲ್ ಗಾಂಧಿಗೆ ಹತ್ತಿಯಿಂದ ಮಾಡಿದ ಹಾರವನ್ನು ಹಾಕಿ ರಾಹುಲ್ ಗಾಂಧಿಯವರ ಬಳಿ ಒಂದು ದಿನಕ್ಕೆ 125 ರೂಪಾಯಿ ಕೂಲಿ ಕೊಡ್ತಾರೆ. ಸಾಕಷ್ಟು ಕಷ್ಟ ಪಟ್ಟು ಕೆಲಸ ಮಾಡುತಿದ್ದೇವೆ ಆದ್ರೆ ಕಡಿಮೆ ಸಂಬಳ ಕೊಡ್ತಿದ್ದಾರೆ.ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲಾ. ಹತ್ತಿ ಕೂಡ ಸರ್ಕಾರ ಸಪ್ಲೈ ಮಾಡುತ್ತಿಲ್ಲಾ ಎಂದು ಹೇಳುವ ಮೂಲಕ ಸಂಬಳವನ್ನು ಹೆಚ್ಚು ಮಾಡುವಂತೆ ರಾಹುಲ್ ಗಾಂಧಿಯವರಿಗೆ ಮನವಿ ಸಲ್ಲಿಸಿದರು.
ಬಳಿಕ ರಾಹುಲ್ ಗಾಂಧಿಯವರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಖಾದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿರುವವರ ಜೊತೆ ಫೋಟೋ ಶೆಷನ್ ನಡೆಸಿದರು.
ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ…
ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…
ಹೊಸದಿಲ್ಲಿ : ದೇಶಾದ್ಯಂತ ಡಿಸೆಂಬರ್ 26 ರಿಂದ ಅನ್ವಯವಾಗುವಂತೆ ರೈಲ್ವೆ ಇಲಾಖೆಯು ಪ್ರಯಾಣ ದರ ಏರಿಕೆ ಮಾಡಿದೆ. ಪರಿಷ್ಕೃತ ದರಗಳಂತೆ,…
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…