ಚಾಮರಾಜನಗರ: ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳ ವ್ಯಾಪ್ತಿಯ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಹಸಿ ಹಾಗೂ ಒಣ ಕಸವನ್ನಾಗಿ ವಿಂಗಡಿಸುವ ಕುರಿತ ಪ್ರತಿಜ್ಞೆ ಬಗ್ಗೆ ಹಮ್ಮಿಕೊಳ್ಳಲಾಗಿರುವ ಸಹಿ ಸಂಗ್ರಹ ಅಭಿಯಾನವು ಇಂದು(ಗುರುವಾರ) ಆರಂಭಗೊಂಡಿತು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲಾ ನಗರಾಭಿವೃದ್ದಿ ಕೋಶದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಫೋಟೊ ಬೂತ್ ಪಕ್ಕದಲ್ಲಿ ಸಹಿ ಹಾಕಿ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಅತಿ ಹೆಚ್ಚು ತ್ಯಾಜ್ಯ ಉತ್ಪಾದನೆ ಆಗುವಂತಹ ಸ್ಥಳಗಳಾದ ಹೋಟೆಲ್, ಕಲ್ಯಾಣ ಮಂಟಪಗಳು, ವಾಣಿಜ್ಯ ಚಟುವಟಿಕೆ ಪ್ರದೇಶಗಳಲ್ಲಿ ಹಸಿಕಸ ಹಾಗೂ ಒಣಕಸವನ್ನಾಗಿ ವಿಂಗಡಿಸುವ ಜವಾಬ್ದಾರಿ ಹೆಚ್ಚಿದೆ. ಅಂತಹ ಕಡೆಯೂ ಸ್ಥಳೀಯ ಸಂಸ್ಥೆಗಳೊಡನೆ ಕೈ ಜೋಡಿಸಿ ವೈಜ್ಞಾನಿಕ ಕಸ ವಿಂಗಡಣೆಗೆ ಸಹಕರಿಸಬೇಕು ಎಂದರು.
ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು ಮಾತನಾಡಿ, ಸ್ವಚ್ಛ ಭಾರತ್ ಮಿಷನ್ ಯೋಜನೆ ಯಶಸ್ವಿಗೆ ಜನರ ಸಹಕಾರ ಅಗತ್ಯ, ಸ್ವಚ್ಛತಾ ಆಪ್ ಡೌನ್‌ಲೋಡ್ ಮಾಡಿ ಅದರಲ್ಲಿ ಸ್ವಚ್ಛತೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಿದಲ್ಲಿ ೪೮ ಗಂಟೆಗಳಲ್ಲಿ ಬಗೆಹರಿಸಲಾಗುವುದು ಎಂದರು.
ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ಪಿ.ಸುಧಾ, ಪರಿಸರ ಇಂಜಿನಿುಂರ್ ಗಿರಿಜಾ, ಆರೋಗ್ಯ ನಿರೀಕ್ಷಕರಾದ ಸುಷ್ಮಾ, ಮಂಜುನಾಥ, ಗ್ರೀನ್ ಸಂಸ್ಥೆಯ ಕಾರ್ಯದರ್ಶಿ ಮಹದೇವಸ್ವಾಮಿ ಉಪಸ್ಥಿತರಿದ್ದರು.
ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…
ಬೆಂಗಳೂರು : ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…
ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…
ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್ ಮಾಡಿ ಬಹಳ…
ಮೈಸೂರು : ನಿರ್ದಿಷ್ಟ ಬ್ರಾಂಡ್ನ ಮೊಟ್ಟೆಗಳಲ್ಲಿ ಕ್ಯಾನ್ಸರ್ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…
ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…