ಜಿಲ್ಲೆಗಳು

ಅನಿಲ ಸೋರಿಕೆ ಪ್ರಕರಣ : ಪ್ಲಾಂಟ್‌ ಸ್ಥಳಾಂತರಕ್ಕೆ ಆಗ್ರಹ

ಸೋರಿಕೆಯಾಗಿದ್ದ ಸಿಲಿಂಡರ್ ವಾಪಸ್

ತಿ.ನರಸೀಪುರ: ಪಟ್ಟಣದ ನೀರು ಶುದ್ಧೀಕರಣ ಘಟಕದಲ್ಲಿ ಅಲ್ಪ ಪ್ರಮಾಣದಲ್ಲಿ ಕ್ಲೋರಿನ್ ಸೋರಿಕೆಯಾಗಿದ್ದ ಸಿಲಿಂಡರ್ ಅನ್ನು ಕಂಪೆನಿಗೆ ಹಿಂತಿರುಗಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಬಸವರಾಜು ‘ಆಂದೋಲನ’ಕ್ಕೆ ತಿಳಿಸಿದ್ದಾರೆ.
ನಂತರ ಮಾತನಾಡಿದ ಅವರು, ಸಿಲಿಂಡರ್‌ನಲ್ಲಿ ನೀರು ಕಡಿಮೆ ಆಗಿದ್ದರಿಂದ ಅತ್ಯಂತ ಸಣ್ಣ ಮಟ್ಟದಲ್ಲಿ ಸೋರಿಕೆಯಾಗಿದೆ. ಯಾವುದೇ ಅನಾಹುತ ಆಗಿಲ್ಲ. ಮುನ್ನೆಚ್ಚರಿಕೆಯ ಕ್ರಮವಾಗಿ ಶುದ್ಧೀಕರಣ ಘಟಕದ ಸಮೀಪವಿರುವ ೧೫ ಮನೆಗಳ ಕುಟುಂಬದವರನ್ನು ಸ್ಥಳಾಂತರಿಸಲಾಗಿತ್ತು. ಅವರೆಲ್ಲರನ್ನೂ ಈಗ ಮತ್ತೆ ಮನೆಗೆ ಕಳುಹಿಸಲಾಗಿದೆ. ಎಲ್ಲವೂ ಸರಿಯಾಗಿದೆ. ಸೋರಿಕೆಯಾಗಿದ್ದು ಹೆಚ್ಚುವರಿ ಸಿಲಿಂಡರ್. ಇದನ್ನು ಕಂಪೆನಿಗೆ ಹಿಂತಿರುಗಿಸಲಾಗಿದ್ದು, ಹೊಸ ಸಿಲಿಂಡರನ್ನು ನೀಡಲಿದ್ದಾರೆ ಎಂದರು.

ಕ್ಲೋರಿನ್ ಸೋರಿಕೆಯಿಂದ ಯಾವುದೇ ಅನಾಹುತಗಳು ಆಗುವುದಿಲ್ಲ. ಸೋರಿಕೆಯಿಂದ ಕಣ್ಣು ಉರಿ, ಮೈ ಕೆರೆತ, ಅಲರ್ಜಿ, ಕೆಮ್ಮು ಮುಂತಾದ ಸಣ್ಣಪುಟ್ಟ ಸಮಸ್ಯೆಗಳಾಗುತ್ತವೆ. ಕಳೆದ ವರ್ಷ ಸೋರಿಕೆಯಾಗಿದ್ದಂತೆ ಶುಕ್ರವಾರ ಸೋರಿಕೆ ಆಗಿಲ್ಲ. ಆದ್ದರಿಂದ ಯಾವುದೇ ಆತಂಕ ಬೇಡ.
-ಡಾ.ರವಿಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ, ತಿ.ನರಸೀಪುರ.


ಅಧಿಕಾರಿಗಳ ನಿರ್ಲಕ್ಷ್ಯದಿಂದ ಕ್ಲೋರಿನ್ ಸೋರಿಕೆಯಾಗಿದೆ. ಕಳೆದ ವರ್ಷವೇ ಸೋರಿಕೆಯಾಗಿದ್ದಾಗ ಎಚ್ಚೆತ್ತುಕೊಂಡು ಗಮನಹರಿಸಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ಈಗಲಾದರೂ ಸಿಲಿಂಡರ್ ಗಳನ್ನು ಅಳವಡಿಸುವಾಗ ಸಂಪೂರ್ಣವಾಗಿ ಪರಿಶೀಲಿಸಿ ಅಳವಡಿಸಬೇಕು. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು. ಪ್ಲಾಂಟ್‌ಅನ್ನು ಇಲ್ಲಿಂದ ಸ್ಥಳಾಂತರಿಸಬೇಕೆಂದು ಆಗ್ರಹಿಸಿದರಲ್ಲದೆ,ಆಗ ಮಾತ್ರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.
-ಗುರುಮೂರ್ತಿ, ತಿ. ನರಸೀಪುರ.

 

andolanait

Recent Posts

ಅರಮನೆ ಮುಂಭಾಗ ಭಾರಿ ಸ್ಫೋಟ : ಇಬ್ಬರು ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

2 mins ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

2 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

2 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

3 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

3 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

3 hours ago