ಮೈಸೂರು: ವೈದ್ಯಕೀಯ ಸೀಟು ಕೊಡಿಸುವ ಅಧಿಕಾರ ಯಾರಿಗೂ ಇಲ್ಲ. ಇದು ನನ್ನ ಮೇಲೆ ಆಗುತ್ತಿರುವ ಅಪಪ್ರಚಾರ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಡಾ.ಎಂ.ಬಿ.ಮಂಜೇಗೌಡ ಸ್ಪಷ್ಟಪಡಿಸಿದ್ದಾರೆ.
ರಾಜ್ಯದ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಪೈಕಿ ಒಂದಾದ ಕಿಮ್ಸ್‌ನಲ್ಲಿ (ಕೆಂಪೇಗೌಡ ವೈದ್ಯಕೀಯ ಶಾಲೇಜು) ವೈದ್ಯಕೀಯ ಪದವಿ ವ್ಯಾಸಂಗಕ್ಕೆ ಪ್ರವೇಶ ಕುರಿತಂತೆ ಸೀಟು ಕೊಡಿಸುವ ಅಧಿಕಾರ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾದಿಯಾಗಿ ಯಾವುದೇ ನಿರ್ದೇಶಕರಿಗೆ ಇಲ್ಲ. ಕಿಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಕೊಡಿಸುವುದಾಗಿ ನಂಬಿಸಿ ಮೋಸ ಮಾಡಲಾಗುತ್ತಿದೆ ಎಂಬ ವಿಚಾರ ವ್ಯಾಪಕವಾಗಿ ಹರಡಿದ್ದು, ಯಾವುದೇ ಸಂಘದ ನಿರ್ದೇಶಕರಿಗೆ, ಅಧ್ಯಕ್ಷರಿಗೆ, ಕಾರ್ಯದರ್ಶಿಗಳಿಗೆ ಆ ರೀತಿಯ ಯಾವುದೇ ಅಧಿಕಾರ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಿಮ್ಸ್‌ನಲ್ಲಿ ವೈದ್ಯಕೀಯ ಸೀಟು ಕೊಡಿಸುತ್ತೇವೆಂಬುದು ಸತ್ಯಕ್ಕೆ ದೂರವಾದ ಸಂಗತಿ. ಕೆಲವರ ಈ ರೀತಿಯ ವ್ಯವಹಾರಕ್ಕೂ ರಾಜ್ಯ ಒಕ್ಕಲಿಗರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಕಿಮ್ಸ್ ಕಾಲೇಜಿಗೂ ಯಾವುದೇ ಸಂಬಂಧ ಇಲ್ಲ, ಆ ರೀತಿಯ ಅಧಿಕಾರವನ್ನು ಸಂಘ ಯಾವುದೇ ವ್ಯಕ್ತಿಗೂ ನೀಡಿಲ್ಲ ಮತ್ತು ಆ ವ್ಯವಸ್ಥೆ ಸಂಘದಲ್ಲಿ ಇಲ್ಲ, ನನ್ನ ಮೇಲೆ ಸುಳ್ಳು ಆರೋಪ ಮತ್ತು ಅಪಪ್ರಚಾರ ಮಾಡಲಾಗುತ್ತಿದೆ ಎಂದು ಎಂ.ಬಿ.ಮಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.