ಜಿಲ್ಲೆಗಳು

ಉತ್ತಮ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ: ವಿಶ್ವನಾಥ್

ಮೈಸೂರು: ಉತ್ತಮ ಆರೋಗ್ಯ, ಉತ್ಸಾಹ ಹಾಗೂ ಉಲ್ಲಾಸಭರಿ ಜೀವನಕ್ಕಾಗಿ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ.ವಿಶ್ವನಾಥ್ ಹೇಳಿದರು.
ಬುಧವಾರ ನಗರದ ಬೇಡನ್‌ಪೂವೆಲ್ ಪಬ್ಲಿಕ್ ಶಾಲೆಯ ಕ್ರೀಡಾ ಮೈದಾನದಲ್ಲಿ ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ವತಿಯಿಂದ ದಿ.ಹೆಚ್.ಕೆಂಪೇಗೌಡ, ದಿ.ಆರ್.ನಂಜಯ್ಯ ಮತ್ತು ದಿ.ಹೆಚ್.ಬಿ,.ನರಸಯ್ಯ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಥ್ರೋಬಾಲ್, ಕಬ್ಬಡ್ಡಿ ಮತ್ತು ವಾಲೀಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇವಲ ಪಠ್ಯ ಚಟುವಟಿಕೆಗಳಲ್ಲಿ ತೊಡಗಿದರೆ ಆರೋಗ್ಯದಂತಹ ವಿಷಯಗಳ ಮೇಲೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ, ಅಂತಹ ಸಂದರ್ಭಗಳಲ್ಲಿ ಈ ರೀತಿಯ ಕ್ರೀಡಾಕೂಟಗಳು ವಿದೈಆರ್ಥಿಗಳ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತವೆ ಎಂದರು.
ಕ್ರೀಡಾಕೂಟಗಳಲ್ಲಿ ಭಾಗವಹಿಸುವುದೇ ಸಂತಸದ ವಿಚಾರ ಎಂದು ನೀವು ತಿಳಿದುಕೊಳ್ಳಬೇಕು. ಕ್ರೀಡೆಗಳಲ್ಲಿಯೂ ಭಾಗವಹಿಸಿ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇದರಿಂದ ನಿಮ್ಮ ಮುಂದಿನ ಭವಿಷ್ಯ ಉತ್ತಮವಾಗಿರುತ್ತದೆ ಹಾಗೂ ಹಲವೆ ಸಾಧನೆಗಳನ್ನು ಮಾಡಲು ಸಹಕಾರಿಯಾಗುತ್ತದೆ ಎಂದರು.
ಕ್ರೀಡಾಕೂಟದಲ್ಲಿ ವಿದ್ಯಾವರ್ಧಕ, ಸದ್ವಿದ್ಯ, ಮರಿಮಲ್ಲಪ್ಪ, ಸಂತ ಫಿಲೋಮಿನಾ, ವಿಜಯವಿಠ್ಠಲ ಸೇರಿದಂತೆ ಹಲವು ಕಾಲೇಜಿನ ೩೧ ತಂಡಗಳು ಭಾಗವಹಿಸಿದ್ದವು. ೧೧ ತಂಡ ಕಬ್ಬಡ್ಡಿಗೆ. ೧೧ ತಂಡ ವಾಲೀಬಾಲ್ ಪಂದ್ಯಕ್ಕೆ ಹಾಗೂ ೯ ತಂಡಗಳು ಥ್ರೋಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯ ಹೆಚ್.ಕೆ.ರಮೇಶ್, ಗೌರವ ಕೋಶಾಧ್ಯಕ್ಷ ಶೈಲಾರಾಮಣ್ಣವರ್, ಪ್ರಾಂಶುಪಾಲ ಸಿದ್ದಯ್ಯ ಮುಂತಾದವರು ಭಾಗವಹಿಸಿದ್ದರು. ಸಂಜೆ ಸಮಾರೋಪ ಸಮಾರಂಭ ನಡೆಯಿತು.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago