Mysore
25
overcast clouds
Light
Dark

ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮಿಸಬೇಕು : ಟಿಪಿ ಶಿವಕುಮಾರ್

ಹನೂರು: ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಪ್ರತಿಯೊಬ್ಬರು ಶ್ರಮ ವಹಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿಪಿ ಶಿವಕುಮಾರ್ ತಿಳಿಸಿದರು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಎಜುಕೇಶನ್ ಸೊಸೈಟಿ ರಿ ಶ್ರೀ ಸಾಲೂರು ಬೃಹನ್ಮಠ ಮಲೆಮಾದೇಶ್ವರ ಬೆಟ್ಟ ಹಾಗೂ ಲಿಂಗೈಕ್ಯ ಶ್ರೀ ಪಟ್ಟದ ಮಹದೇವ ಸ್ವಾಮಿಗಳ ರವರ ಸ್ಮರಣಾರ್ಥ ಸಂಸ್ಥೆಯ ಶಾಲಾ ಕಾಲೇಜುಗಳ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಠದ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿವ್ಯಾಸಂಗ ಮಾಡುತ್ತಿರುವುದು ಸಂತಸದ ವಿಚಾರ. ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟೋಟಗಳಲ್ಲಿ ಆಸಕ್ತಿವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ತಾಲ್ಲೂಕು,ಜಿಲ್ಲಾ ಹಾಗೂ ರಾಜ್ಯ ಮಟ್ಟಗಳಲ್ಲಿ ಸ್ಪರ್ಧಿಸಿ ವಿಜೇತರಾಗಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಶಾಲೆ ಹಾಗೂ ತಮ್ಮ ಪೋಷಕರಿಗೆ ಕೀರ್ತಿ ತರುವಂತೆ ತಿಳಿಸಿದರು.

ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ನಾಗರಾಜು ಮಾತನಾಡಿ ಗುರುವಿನ ಗುರಿ ಪ್ರಾಮಾಣಿಕವಾಗಿ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಯಶಸ್ಸಿನ ಶಿಖರವೇರಲು ಸಾಧ್ಯ ಇಂದಿನ ಸೋಲೇ ಮುಂದಿನ ಜಯಕ್ಕೆ ಮೆಟ್ಟಿಲು ಎಂಬುದನ್ನರಿತು ಸೋಲು-ಗೆಲುವಿನ ಚಿಂತೆ ಮಾಡದೆ ಕ್ರೀಡೆಗಳಲ್ಲಿ ಭಾಗವಹಿಸಬೇಕೆಂದು ತಿಳಿಸಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ನಮ್ಮ ಸಂಸ್ಥೆಯಲ್ಲಿ ಕಾರ್ಯ ಚಟುವಟಿಕೆಗಳು ನಿರಂತರವಾಗಿ ನಡೆಯಬೇಕು ಎಂಬ ಸದುದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ. ಮಕ್ಕಳು ಪಾಠದ ಜೊತೆಗೆ ಆಟೋಟಗಳಲ್ಲಿಆಸಕ್ತಿ ವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರೆನೀಡಿದರು. ಸಾಧಕರ ಸಾಧನೆ ನಿಮಗೆಲ್ಲ ಪ್ರೇರಣೆಯಾಗಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಶ್ರೀ ಸ್ವಾಮಿ, ಹೊಂಡರಬಾಳು ಮಠದ ಶ್ರೀಗಳು ವೃತ್ತ ನಿರೀಕ್ಷಕರು ಗಳಾದ ಬಸವರಾಜು ಸಂತೋಷ ಕಶ್ಯಪ್, ಉದ್ಯಮಿಗಳಾದ ಬಿಲ್ವಾ ಮಹೇಶ್ ಹಾಗೂ ಸಂಸ್ಥೆಯ ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಸಿಬ್ಬಂದಿವರ್ಗದವರು ವಿದ್ಯಾರ್ಥಿಗಳು ಹಾಜರಿದ್ದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ