ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣ ಹುಬ್ಬಳ್ಳಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಬೆಂಗಳೂರಿಗೆ ಸಂಪರ್ಕಿಸುವ (ರೈಲು ಸಂಖ್ಯೆ 07339/07340 ಮತ್ತು 07353/07354) ರೈಲು ಇನ್ಮುಂದೆ ಅರಸಿಕೇರೆ ನಿಲ್ದಾಣದಲ್ಲೂ ನಿಲ್ಲುತ್ತದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಪ್ರತಿದಿನ ಸಂಚರಿಸುವ ಎಸ್‌ಎಸ್‌ಎಸ್ ಹುಬ್ಬಳ್ಳಿ -ಕೆಎಸ್‌ಆರ್ ಬೆಂಗಳೂರು -ಎಸ್‌ಎಸ್‌ಎಸ್ ಹುಬ್ಬಳ್ಳಿ ದೈನಂದಿನ ವಿಶೇಷ ಎಕ್ಸಪ್ರೆಸ್ ರೈಲು (ರೈಲು ಸಂಖ್ಯೆ 07339/07340) ರೈಲನ್ನು ಇನ್ಮುಂದೆ ಎರಡು ಮಾರ್ಗದಲ್ಲೂ ಅರಸಿಕೇರೆ ನಿಲ್ದಾಣದಲ್ಲಿ ನಿಲ್ಲಿಸಲಾಗುತ್ತದೆ.
ರೈಲು ಸಂಖ್ಯೆ 07339 ರೈಲು ಇಂದು (ಮಾ.22) ಬೆಳಿಗ್ಗೆ 3:33ಕ್ಕೆ ಅರಸಿಕೇರೆ ತಲುಪಿದ್ದು, 3:36 ಬೆಳಗ್ಗೆ ಅಲ್ಲಿಂದ ಹೊರಟಿದೆ. ಅದೇ ರೀತಿ, ಹಿಂದಿರುಗುವ ಸಮಯದಲ್ಲಿ, ರೈಲು ಸಂಖ್ಯೆ 07340 ಕೆಎಸ್‌ಆರ್ ರಾತ್ರಿ 02:07 ಕ್ಕೆ ಅರಸೀಕೆರೆಗೆ ಆಗಮಿಸಲಿದ್ದು, ಅಲ್ಲಿಂದ 02:10 ಕ್ಕೆ ಹೊರಡಲಿದೆ.
ಮಾರ್ಚ್ 23, 2023 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 07353/07354 ಕೆಎಸ್‌ಆರ್ ಬೆಂಗಳೂರು-ಎಸ್‌ಎಸ್‌ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ವಿಶೇಷ ಎಕ್ಸ್‌ಪ್ರೆಸ್ ಎರಡು ದಿಕ್ಕುಗಳಲ್ಲಿ ಯಶವಂತಪುರ, ತುಮಕೂರು ಮತ್ತು ಅರಸೀಕೆರೆ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆಗಳನ್ನು ಹೊಂದಿರುತ್ತದೆ.
ಈ ರೈಲು (07353) ಯಶವಂತಪುರಕ್ಕೆ 07:39/07:41 ಕ್ಕೆ, ತುಮಕೂರು 08:28/08:30 ಕ್ಕೆ ಮತ್ತು ಅರಸೀಕೆರೆ 09:40 ಅಥವಾ 09:43 ಕ್ಕೆ ಆಗಮಿಸಲಿದೆ. ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ (07354) ಅರಸೀಕೆರೆಗೆ ಸಂಜೆ 07:17 ಅಥವಾ 07:20 ಕ್ಕೆ, ತುಮಕೂರು ರಾತ್ರಿ 08:48 ಅಥವಾ 08:50 ಕ್ಕೆ ಮತ್ತು ಯಶವಂತಪುರ ರಾತ್ರಿ 10:08/10:10 ಕ್ಕೆ ತಲುಪಲಿದೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್‌ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…