ಕೆ.ಆರ್.ಪೇಟೆ ತಾಲ್ಲೂಕಿನ ಸಂತೆಬಾಚಹಳ್ಳಿ ಹಳೆಅತ್ತಿಗುಪ್ಪೆ ಗ್ರಾಮದಲ್ಲಿ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರವನ್ನು ಗಣ್ಯರು ಉದ್ಘಾಟಿಸಿದರು.
ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನಕ್ಕೆ ಎನ್‌ಎಸ್‌ಎಸ್ ಬಳಕೆ: ತಹಸಿಲ್ದಾರ್ ರೂಪಾ
ಕೆ.ಆರ್.ಪೇಟೆ: ಸರ್ಕಾರಗಳ ಕಾರ್ಯ ನಿರ್ವಹಣೆಯ ಶೈಲಿಯು ಬದಲಾಗಿದ್ದು, ಜನರ ಮನೆಯ ಬಾಗಿಲಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವ ವ್ಯವಸ್ಥೆ ರೂಪಿಸಲಾಗಿದೆ. ಇಂತಹ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರವು ರಾಷ್ಟ್ರೀಯ ಸೇವಾ ಯೋಜನಾ ಶಿಬಿರಗಳನ್ನು ಬಳಸಿಕೊಳ್ಳುತ್ತಿದೆ ಎಂದು ತಹಸಿಲ್ದಾರ್ ಎಂ.ವಿ.ರೂಪಾ ಹೇಳಿದರು.
ತಾಲ್ಲೂಕಿನ ಸಂತೆಬಾಚಹಳ್ಳಿ ಹೋಬಳಿಯ ಹಳೆಅತ್ತಿಗುಪ್ಪೆ ಗ್ರಾಮದಲ್ಲಿ ಪಟ್ಟಣದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಆೋಂಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯವು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗದಿದ್ದರೆ ಅಭಿವೃದ್ಧಿಯನ್ನು ಹೇಗೆ ತಾನೇ ಸಾಧಿಸಲು ಸಾಧ್ಯ ಎಂಬುದನ್ನು ಅರಿತ ಕೇಂದ್ರ ಸರ್ಕಾರವು, ಭಾರತವು ತನ್ನ ಸ್ವಾತಂತ್ರ್ತ್ಯ ಅಮೃತ ಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವ ನೆನಪಿಗಾಗಿ ಅಮೃತ ಸಮುದಾಯ ಯೋಜನೆಯನ್ನು ರೂಪಿಸಿದೆ. ಸರ್ಕಾರಿ ಇಲಾಖೆಗಳು ಎಷ್ಟೇ ಪ್ರಾವಾಣಿಕವಾಗಿ ಕಾರ್ಯಕ್ರಮಗಳ ಅನುಷ್ಠಾನವನ್ನು ಮಾಡಿದರೂ ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಸೌಲಭ್ಯಗಳು ತಲುಪಿರುವುದಿಲ್ಲ. ಅಂತಹ ಕುಟುಂಬಗಳನ್ನು ಸಂಪರ್ಕಿಸಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಶಿಬಿರಾರ್ಥಿಗಳು ಗ್ರಾಮದ ಮನೆ ಮನೆಗಳ ಬಾಗಿಲಿಗೆ ಬರುತ್ತಿದ್ದು, ಇದರ ಪ್ರಯೋಜನವನ್ನು ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ರೂಪಾ ಮನವಿ ಮಾಡಿದರು.
ಕಂದಾಯ ಇಲಾಖೆಯು ಪ್ರತಿಯೊಂದು ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿಯನ್ನು ಹೊತ್ತಿದೆ. ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಆಧಾರ್ ಹೇಗೆ ಬೇಕಾಗುತ್ತದೋ ಹಾಗೆೆಯೇ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಫಲಾನುಭವಿಯಾಗಲು ಆರ್‌ಟಿಸಿ ಕಡ್ಡಾಯವಾಗಿದೆ. ತಾಲ್ಲೂಕಿನಲ್ಲಿ ಬಹುತೇಕ ಪೌತಿ ಖಾತೆಗಳದ್ದೇ ಸಮಸ್ಯೆಯಾಗಿದೆ. ಕಂದಾಯ ಇಲಾಖೆಯ ಸಮಸ್ಯೆಗಳನ್ನು ಪರಿಹರಿಸಲು ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈ ಶಿಬಿರವು ಮುಗಿಯುವುದರೊಳಗೆ ಇಲಾಖೆಯ ಉಪ ತಹಸಿಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಇಲ್ಲಿಯೇ ಮೊಕ್ಕಾಂ ಹೂಡಲಿದ್ದಾರೆ. ಎಲ್ಲರೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಮಹಾತ್ಮ ಗಾಂಧಿ ಮತ್ತು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪ್ರಾಂಶುಪಾಲ ಡಾ. ಟಿ.ಎಂ.ದೇವರಾಜ ಅಧ್ಯಕ್ಷತೆ ವಹಿಸಿದ್ದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಿವಕುಮಾರ್, ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಬಿ.ಎ.ಮಂಜುನಾಥ್, ಅಘಲಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಕಾತಿ, ಸಂತೆಬಾಚಹಳ್ಳಿ ಹೋಬಳಿ ಉಪ ತಹಸಿಲ್ದಾರ್ ಗೌರಮ್ಮ, ರಾಜಸ್ವ ನಿರೀಕ್ಷಕ ರಮೇಶ್, ಕಿಕ್ಕೇರಿ ಹೋಬಳಿ ಉಪ ತಹಸಿಲ್ದಾರ್ ಲಕ್ಷ್ಮೀಕಾಂತ್, ಗ್ರಾಮದ ಮುಖಂಡರು ಭಾಗವಹಿಸಿದ್ದರು.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…