Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಸರ್ಕಾರಿ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿ : ಶಾಸಕ ಆರ್‌.ನರೇಂದ್ರ

ಹನೂರು: ಸ್ತ್ರೀಶಕ್ತಿ ಮಹಿಳಾ ಸ್ವಸಹಾಯ ಸಂಘದವರು ಸರ್ಕಾರ ನೀಡುವ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ವೈಯಕ್ತಿಕವಾಗಿ ಹಾಗೂ ಸಂಘಗಳ ಬಲವರ್ಧನೆಗೆ ಮುಂದಾಗಬೇಕು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಅಮೃತ ಸ್ವಸಹಾಯ ಕಿರು ಉದ್ದಿಮೆ ಯೋಜನೆಯಡಿ 50 ಮಹಿಳಾ ಸ್ವಸಹಾಯ ಗುಂಪುಗಳಿಗೆ ತಲಾ ಒಂದು ಲಕ್ಷ ರೂ.ಗಳ ಬೀಜಧನ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇಂದಿನ ಯುಗದಲ್ಲಿ ಮಹಿಳೆಯರು ಯಾರಿಗಿಂತಲೂ ಕಡಿಮೆ ಇಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ತಮ್ಮದೇ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ, ಗ್ರಾಮೀಣ ಭಾಗದ ಮಹಿಳೆಯರು ಮಹಿಳಾ ಸ್ವಯಂ ಸಂಘಗಳ ಮೂಲಕ ಆರ್ಥಿಕವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಸಂತಸದ ವಿಷಯ. ಪ್ರತಿಯೊಬ್ಬ ಮಹಿಳೆಯರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಗಮನಹರಿಸಿ,ಸರ್ಕಾರ ನೀಡುವ ಸಹಾಯಧನವನ್ನು ಕ್ರೋಡೀಕರಿಸಿಕೊಂಡು ಆರ್ಥಿಕ ಸಬಲರಾಗಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ತಹಸಿಲ್ದಾರ್ ಆನಂದಯ್ಯ , ಸಿಡಿಪಿಒ ನಾಗೇಶ್, ಮಹಿಳಾ ಮೇಲ್ವಿಚಾರಕಿ ಶಿವಲೀಲಾ, ಗೌಸಿಯಾ, ವಿವಿಧ ಸ್ವ ಸಹಾಯ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!