ಹನೂರು: ಸೂಳೇರಿಪಾಳ್ಯ ಗ್ರಾಮಪಂಚಾಯಿತಿ 6ನೇ ವಾರ್ಡಿಗೆ ನಡೆದ ಗ್ರಾಮ ಪಂಚಾಯಿತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಬಸವರಾಜು ಆಯ್ಕೆಯಾಗಿದ್ದಾರೆ.
ಬಿಜೆಪಿ ಬೆಂಬಲಿತ ಸದಸ್ಯರಾಗಿ ಆಯ್ಕೆಯಾಗಿದ್ದ ವೆಂಕಟಶೆಟ್ಟಿ ರವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು 45 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಸೂಳೇರಿಪಾಳ್ಳ್ಯ ಗ್ರಾಮಪಂಚಾಯಿತಿ ಯಲ್ಲಿ ಒಟ್ಟು 18 ಕಾಂಗ್ರೆಸ್ ಬೆಂಬಲಿತ 5,ಬಿಜೆಪಿ ಬೆಂಬಲಿತ 4ಹಾಗೂ ಜೆಡಿಎಸ್ ಬೆಂಬಲಿತ 9 ಸದಸ್ಯರು ಆಯ್ಕೆಯಾಗಿದ್ದರು.ಇದೀಗ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬಸವರಾಜು ಗೆಲ್ಲುವ ಮೂಲಕ ಕಾಂಗ್ರೆಸ್ 1ಸ್ಥಾನವನ್ನು ಹೆಚ್ಚಿಸಿಕೊಂಡಿದೆ. ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಸುಧಾ ಅಧ್ಯಕ್ಷರಾಗಿ,ಬಿಜೆಪಿ ಬೆಂಬಲಿತ ಸದಸ್ಯೆ ಮಹಾದೇವಮ್ಮ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.





