Mysore
27
overcast clouds

Social Media

ಭಾನುವಾರ, 21 ಜೂನ್ 2026
Light
Dark

ಗ್ರಾಮೀಣ ದಸರಾ ಯಶಸ್ವಿಗೆ ಜಿಟಿಡಿ ಮನವಿ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2022ರ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನಲ್ಲಿ ಗುರುವಾರದಂದು ಬೆಳಿಗ್ಗೆ 9.00 ಗಂಟೆಗೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ಧೂರಿ ಮೆರವಣಿಗೆ ಸಾಗುವ ಮೂಲಕ ಗ್ರಾಮೀಣ ದಸರಾವನ್ನು ಹಮ್ಮಿಕೊಳ್ಳಲಾಗಿದೆ. ಈ ಗ್ರಾಮೀಣ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡುಬೇಕೆಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರವರು ಮನವಿ ಮಾಡಿದರು.

ದಸರಾ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ 25 ಟ್ಯಾಬ್ಲೂ (ಮಾಹಿತಿ ರಥ), ಹತ್ತು ಸಾಂಸ್ಕೃತಿಕ ಕಲಾ ತಂಡಗಳು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು, 101 ಕುಂಬಮೇಳ ಸ್ವಾಗತ ಇರಲಿದ್ದು,

ಅಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್‌ ರವರು ಉದ್ಘಾಟಿಸಲಿದ್ದು, ಸಂಸದರಾದ ಪ್ರತಾಪ್‌ ಸಿಂಹ ಅವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ

ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಜೊತೆಗೆ ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ ಎಂದು ಮಾಹಿತಿ ನೀಡುವ ಮೂಲಕ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!