ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2022ರ ಮಹೋತ್ಸವದ ಅಂಗವಾಗಿ ಮೈಸೂರು ತಾಲ್ಲೂಕಿನಲ್ಲಿ ಗುರುವಾರದಂದು ಬೆಳಿಗ್ಗೆ 9.00 ಗಂಟೆಗೆ ದಾರಿಪುರ ಗ್ರಾಮದ ದೇವಸ್ಥಾನದಿಂದ ಸುಮಾರು 2 ಕಿ.ಮೀ. ಅದ್ಧೂರಿ ಮೆರವಣಿಗೆ ಸಾಗುವ ಮೂಲಕ ಗ್ರಾಮೀಣ ದಸರಾವನ್ನು ಹಮ್ಮಿಕೊಳ್ಳಲಾಗಿದೆ. ಈ ಗ್ರಾಮೀಣ ದಸರಾವನ್ನು ಯಶಸ್ವಿಯಾಗಿ ನಡೆಸಿಕೊಡುಬೇಕೆಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡರವರು ಮನವಿ ಮಾಡಿದರು.
ದಸರಾ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ 25 ಟ್ಯಾಬ್ಲೂ (ಮಾಹಿತಿ ರಥ), ಹತ್ತು ಸಾಂಸ್ಕೃತಿಕ ಕಲಾ ತಂಡಗಳು, ಸುಮಾರು 3 ಸಾವಿರಕ್ಕೂ ಹೆಚ್ಚು ಜನರು, 101 ಕುಂಬಮೇಳ ಸ್ವಾಗತ ಇರಲಿದ್ದು,
ಅಂದು ಬೆಳಿಗ್ಗೆ 10.00 ಗಂಟೆಗೆ ತಾಲ್ಲೂಕಿನ ಜಯಪುರ ಗ್ರಾಮದ ಗುಜ್ಜಮ್ಮ ದೇವಸ್ಥಾನದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಉದ್ಘಾಟಿಸಲಿದ್ದು, ಸಂಸದರಾದ ಪ್ರತಾಪ್ ಸಿಂಹ ಅವರು ಹಾಗೂ ಶಾಸಕರು ಉಪಸ್ಥಿತರಿರಲಿದ್ದಾರೆ
ಈ ವೇಳೆ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಜೊತೆಗೆ ನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲಿ ನುರಿತ ವೈದ್ಯರಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶುಸಂಗೋಪನೆ ಇಲಾಖೆಯಿಂದ ಉಚಿತ ಜಾನುವಾರು ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಮಾರಮ್ಮನ ದೇವಸ್ಥಾನದ ಆವರಣದಲ್ಲಿ ವಿವಿಧ ಇಲಾಖೆಗಳಿಂದ ದೊರಕುವ ಸರ್ಕಾರಿ ಸವಲತ್ತುಗಳ ಮಾಹಿತಿ ಕೇಂದ್ರ ಇರಲಿದೆ ಎಂದು ಮಾಹಿತಿ ನೀಡುವ ಮೂಲಕ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಮನವಿ ಮಾಡಿದರು.
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…
ಮೈಸೂರು: ಸಿ.ಟಿ.ರವಿ ತಪ್ಪು ಮಾಡಿದ್ದರೆ ಸಭಾಪತಿಗಳು ಶಿಕ್ಷೆಯ ಬಗ್ಗೆ ತೀರ್ಮಾನ ಮಾಡಬೇಕು. ಆದರೆ ರಾಜ್ಯದಲ್ಲಿ ಆ ದಿನ ಸಿ.ಟಿ.ರವಿ ಅವರನ್ನು…