Mysore
31
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣ ಗ್ರಾಂ.ಪಂ ಮುಂಭಾಗವೇ ಶವಸಂಸ್ಕಾರ ಮಾಡಿದ ಗ್ರಾಮಸ್ಥರು

ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ  ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ  ಘಟನೆ ಗುರುವಾರ ನಡೆದಿದೆ.

ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು, ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಗ್ರಾ.ಪಂ ಮುಂಭಗವೇ ಶವ ಸಂಸ್ಕಾರ ಮಾಡಿದ್ದಾರೆ.

ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾ.ಪಂ ಕಚೇರಿ ಆವರಣದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾಗಿದ್ದರು ಈ ಸಂದರ್ಭದಲ್ಲಿ ಸ್ಥಳಕ್ಕೆ ಎಸಿ ಗೀತಾ ಹುಡೇದ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಕರ ಮನ ಹೊಲಿಸಲು ವಿಫಲರಾಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ