ಯಳಂದೂರು :ಸ್ಮಶಾನಕ್ಕೆ ತೆರಳಲು ಸೇತುವೆ ಇಲ್ಲದ ಕಾರಣಕ್ಕೆ ಮಹಿಳೆಯ ಶವವನ್ನು ಗ್ರಾ. ಪಂ ಕಚೇರಿ ಮುಂಭಾಗವೇ ಹೂತು ಹಾಕುವ ಮೂಲಕ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಹೊರಹಾಕಿರುವ ಘಟನೆ ಗುರುವಾರ ನಡೆದಿದೆ.
ಯಳಂದೂರು ತಾಲ್ಲೂಕಿನ ಮಾಂಬಳ್ಳಿ ಗ್ರಾಮದ ಚಂದ್ರಮ್ಮ (48) ಎಂಬ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಸ್ಮಶಾನಕ್ಕೆ ತೆರಳಲು ಕಾಲುವೆಯನ್ನು ದಾಟಿ ಹೋಗಬೇಕಿದ್ದು, ಸುವರ್ಣಾವತಿ ಜಲಾಶಯದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ ಹೀಗಾಗಿ ಗ್ರಾ.ಪಂ ಮುಂಭಗವೇ ಶವ ಸಂಸ್ಕಾರ ಮಾಡಿದ್ದಾರೆ.
ಜಿಲ್ಲಾಡಳಿತ ಮತ್ತು ಸ್ಥಳೀಯ ಶಾಸಕರಿಗೆ ಹತ್ತಾರು ವರ್ಷಗಳಿಂದ ಮನವಿ ಮಾಡುತ್ತ ಬಂದಿದ್ದರೂ ಸೇತುವೆ ನಿರ್ಮಾಣವಾಗದ ಹಿನ್ನೆಲೆಯಲ್ಲಿ ಇಂದು ಗ್ರಾ.ಪಂ ಕಚೇರಿ ಆವರಣದಲ್ಲೇ ಅಂತ್ಯಸಂಸ್ಕಾರ ನೆರವೇರಿಸಲು ಮುಂದಾಗಿದ್ದರು ಈ ಸಂದರ್ಭದಲ್ಲಿ ಸ್ಥಳಕ್ಕೆ ಎಸಿ ಗೀತಾ ಹುಡೇದ, ಡಿವೈಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಿಕರ ಮನ ಹೊಲಿಸಲು ವಿಫಲರಾಗಿದ್ದಾರೆ.
ನವೀನ್ ಡಿಸೋಜ ಕೆಲವೆಡೆ ಸ್ಪಿಂಕ್ಲರ್ ಮೊರೆ ಹೋದ ಕೃಷಿಕರು; ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕಡಬೂರು ಗ್ರಾಮದಲ್ಲಿ ಫೆ.೨೬ ಮತ್ತು ೨೭ರಂದು ನೂತನವಾಗಿ ನಿರ್ಮಾಣವಾಗಿರುವ ಶಿವ ಮತ್ತು ಗಣೇಶ ದೇವಾಲಯದ…
ಮಂಜು ಕೋಟೆ ಕೋಟೆ: ಅಧಿಕಾರಿಗಳು, ಗುತ್ತಿಗೆದಾರರ ವಿರುದ್ಧ ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ಅಧಿಕಾರಿಗಳ ಬೇಜವಾಬ್ದಾರಿ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಲಕ್ಷಾಂತರ ರೂ.…
ರಂಗಕಲೆಯ ಜೀವಂತಿಕೆಯನ್ನು ಕಾಪಾಡುವ ಹೊಣೆ ವಿಶಾಲ ಸಮಾಜದ ಮೇಲಿದೆ. ನಾ.ದಿವಾಕರ ವರ್ತಮಾನದ ಸಂದರ್ಭದಲ್ಲಿ ನಮ್ಮ ಸಮಾಜ ಎದುರಿಸುತ್ತಿರುವ ಜಟಿಲ ಸಮಸ್ಯೆಗಳನ್ನು…
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ‘ಧರ್ಮ ಯುದ್ಧ’ ಸಾರಿರುವ ಆದಿಗುರು ಶಂಕರಾಚಾರ್ಯರೇ ಸ್ಥಾಪನೆ ಮಾಡಿದ ಜ್ಯೋತಿರ್ ಪೀಠದ…
ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಚಿಂತನೆ ಹಿನ್ನೆಲೆ ವಿದ್ಯಾರ್ಥಿಗಳ ಮನದ ಮಾತು ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ…