ಜಿಲ್ಲೆಗಳು

ʼಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ’ : ನಿವೃತ್ತ IAS ಅಧಿಕಾರಿ ಅಮರ ನಾರಾಯಣ್‌ ಸಲಹೆ

ಮಂಡ್ಯ: ರೈತರು ಭತ್ತ, ಕಬ್ಬು ಬೆಳೆದು ಶ್ರೀಮಂತರಾಗಿರೋದು ಬಹಳ ಕಡಿಮೆ. ಆದ್ದರಿಂದ ಶ್ರೀಗಂಧ ಬೆಳೆ ಬೆಳೆದು ಶ್ರೀಮಂತರಾಗಿ ಎಂದು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘದ ಅಧ್ಯಕ್ಷ ಅಮರ ನಾರಾಯಣ್ ಸಲಹೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳಗಾರರ ಸಂಘ, ಬೆಂಗಳೂರು ಮತ್ತು ಒಐಎಸ್‌ಸಿಎ ಇಂಟರ್ ನ್ಯಾಷನಲ್ ಕರ್ನಾಟಕ ವಲಯದವರ ಸಂಯುಕ್ತಾಶ್ರಯದಲ್ಲಿ 2022-23 ನೇ ಸಾಲಿನ ಆತ್ಮ ಯೋಜನೆಯಡಿ ಶ್ರೀಗಂಧ, ವನಕೃಷಿ ಮತ್ತು ಸಮಗ್ರ ಕೃಷಿ ಪದ್ಧತಿ ಕುರಿತು ತರಬೇತಿ ಹಾಗೂ ವಿಚಾರಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಮಂಡ್ಯದಲ್ಲಿ 51 ಭಾಗ ನೀರಾವರಿ ಜಮೀನು ಇದೆ. 42  ಸಾವಿರ ಹೆಕ್ಟೇರ್ ಖುಷ್ಕಿ ಭೂಮಿ ಇದೆ. ರೈತರು ನೀರಾವರಿ ಇಲ್ಲದ ಕೃಷಿ ಭೂಮಿಯಲ್ಲಿ ಶ್ರೀಗಂಧ ಬೆಳೆ ಬೆಳೆದು ಆರ್ಥಿಕವಾಗಿ ಲಾಭ ಪಡೆದುಕೊಳ್ಳಬಹುದು ಎಂದು ಕಿವಿಮಾತು ಹೇಳಿದರು.
ಅಂದಿನ ಮೈಸೂರಿನ ರಾಜರು ಹೆಚ್ಚಾಗಿ ಸಿಗುತ್ತಿದ್ದ ಶ್ರೀಗಂಧ ಬೆಳೆುಂನ್ನು ಕಂಡು ಮೈಸೂರು ಸ್ಯಾಂಡಲ್ ಸೋಪ್, ಗಂಧದ ಎಣ್ಣೆ ಕಾರ್ಖಾನೆಗೆ ಬುನಾದಿ ಹಾಕಿದರು. ಅದರ ಪರಿಣಾಮ ಇಂದು ದೇಶ ವಿದೇಶಗಳಲೆಲ್ಲಾ ಶ್ರೀಗಂಧದ ಬೆಳೆ ಶ್ರೀಮಂತವಾಗಿದೆ. ಇಡೀ ಭಾರತದಲ್ಲೇ ಕರ್ನಾಟಕ ಶೇ.71  ಶ್ರೀಗಂಧ ಪೂರೈಸುತ್ತಿದೆ. ಈ ನಿಟ್ಟಿನಲ್ಲಿ ರೈತರು ಶ್ರೀಗಂಧದ ಬೆಳೆಯ ಬಗ್ಗೆ ತಿಳಿದುಕೊಂಡು ಶ್ರೀಗಂಧ ಬೆಳೆಯಬೇಕಿದೆ ಎಂದರು.
ಜಿಪಂ ಸಿಇಒ ಶಾಂತ ಎಲ್.ಹುಲ್ಮನಿ ಮಾತನಾಡಿ, ಪ್ರಗತಿಪರ ರೈತರು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಿರುವ ವಿಧಾನ ಹಾಗೂ ಹೊಸ ತಂತ್ರಜ್ಞಾನಗಳ ಬಳಕೆ ಕುರಿತ ಯಶೋಗಾಥೆಗಳನ್ನು ಇತರೆ ರೈತರೊಂದಿಗೆ ಹಂಚಿಕೊಳ್ಳಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ (ಆಡಳಿತ)ಎಂ.ಬಾಬು, ಸಂಜೀವಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ವಿ.ಎಸ್.ಅಶೋಕ್, ತೋಟಗಾರಿಕೆ ಇಲಾಖೆ ನಿರ್ದೇಶಕ ಮಂಜುನಾಥ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಹರ್ಷ, ಕೃಷಿ ಇಲಾಖೆ ವಿಷುಯ ತಜ್ಞೆ ಸುಚಿತ್ರ ಮತ್ತಿತರರು ಹಾಜರಿದ್ದರು.


ಶ್ರೀಗಂಧದ ಕೃಷಿಯಲ್ಲಿ ಅತಿಥಿ ಸಸ್ಯ ಉಪಯೋಗಿಸುವ ಗೊಬ್ಬರ, ಗಿಡಗಳ ನಡುವೆ ಅಂತರ, ರೋಗ ನಿಗ್ರಹ ಕುರಿತಂತೆ ರೈತರಿಗೆ ಮಾಹಿತಿ ಕೈಪಿಡಿ ಒದಗಿಸಬೇಕು.
ಅಮರ ನಾರಾಯಣ್, ಅಧ್ಯಕ್ಷರು, ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನ ಕೃಷಿ ಬೆಳೆಗಾರರ ಸಂಘ.

andolanait

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

9 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

9 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

10 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

10 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

10 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

10 hours ago