ಮೈಸೂರು: ಇಡೀ ದೇಶದಲ್ಲಿ ಈಗಾಗಲೇ ಬಿಜೆಪಿ ವಿರೋಧಿ ಅಲೆ ವ್ಯಾಪಿಸಿದೆ. ಮಾತಿನ ಮೋಡಿ, ಭರವಸೆಯ ಪ್ರಣಾಳಿಕೆಯಿಂದಲೇ ಅಧಿಕಾರಕ್ಕೇರಿದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸಂಭ್ರಮ ಇನ್ನು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.
ಜನರನ್ನು ಒಂದು ಭಾರಿ ಎರಡು ಭಾರಿ ಯಾಮಾರಿಸಬಹುದು. ಆದರೆ, ಮೂರನೇ ಭಾರಿಯೂ ವಂಚಿಸಲು ಸಾಧ್ಯವಿಲ್ಲ. ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಜೋಡಿ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಅನುಸರಿಸಿ ಚುನಾವಣೆ ಎದುರಿಸಿದೆ. ಹಾಗಾಗಿ ಅದರ ಫಲಿತಾಂಶ ಕರ್ನಾಟಕದ ಮೇಲೆ ಎಳ್ಳಷ್ಟೂ ಪರಿಣಾಮ ಬೀರುವುದಿಲ್ಲ. ಕರ್ನಾಟಕದಲ್ಲಿ ಮುಂಬರುವ ೨೦೨೩ರ ಚುನಾವಣೆ ಬಿಜೆಪಿ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಕೇವಲ ಘೋಷಣೆಗಳ ಸಮಾವೇಶಗಳನ್ನು ರೂಪಿಸಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುತ್ತಿರುವುದೇ ಬಿಜೆಪಿಯ ಹಿನ್ನೆಡೆಗೆ ಹಿಡಿದ ಕೈಗನ್ನಡಿಯಾಗಿದೆ. ಕೇಂದ್ರದ ಬಿಜೆಪಿ ಸಚಿವರು ಕರ್ನಾಟಕದಲ್ಲಿ ಬಂದು ಠಿಕಾಣಿ ಹೂಡಿದರೂ ಖಾಲಿ ಕೈಯಲ್ಲಿ ಹಿಂತಿರುಗುವುದು ಅಕ್ಷರಶಃ ಸತ್ಯ. ಇನ್ನೂ ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶದಿಂದ ಕಾಂಗ್ರೆಸ್ಸಿಗರು ಹಿಗ್ಗುವುದಿಲ್ಲ. ಬದಲಾಗಿ ಕರ್ನಾಟಕದಲ್ಲೂ ಸಿದ್ದರಾಮಯ್ಯ ನೇತೃತ್ವದ ೫ ವರ್ಷಗಳ ಯೋಜನೆಗಳನ್ನು ಮತ್ತೊಮ್ಮೆ ನೆನಪಿಸಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಿ ಕರ್ನಾಟಕದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಿ ಜನಸ್ನೇಹಿ ಆಡಳಿತ ನೀಡುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…