ಮೈಸೂರು: ಗುಜರಾತ್ ವಿಧಾನಸಭೆಯ ಚುನಾವಣೆಯ ಫಲಿತಾಂಶದಿಂದ ಮುಂಬರಲಿರುವ ಕರ್ನಾಟಕ ವಿಧಾನಸಭೆಯ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.ಎಂದು ಕೆಪಿಸಿಸಿ ವಕ್ತಾರ ಎಚ್.ಎ. ವೆಂಕಟೇಶ್ ತಿಳಿಸಿದ್ದಾರೆ. ಗುಜರಾತ್ ನಲ್ಲಿ ಪ್ರಬಲ ವಿರೋಧ ಪಕ್ಷವಾಗಿ ಮತ್ತು ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾರದ ವಾತಾವರಣವನ್ನು ಸೃಷ್ಟಿಸಿ, ಕಾಂಗ್ರೆಸ್ ನಾಯಕರ ಆತ್ಮಸ್ಥೈರ್ಯವನ್ನು ಕುಗ್ಗಿಸಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪಡೆದುಕೊಂಡಿದೆ. ಪ್ರಧಾನಮಂತ್ರಿಯ ತವರೂರಾದ ಗುಜರಾತ್ ನಲ್ಲಿ ನರೇಂದ್ರ ಮೋದಿಯವರು ಜನರ ಮನಸ್ಸನ್ನು ತಲುಪಲು ಹಾಡಿದ ನಾಟಕ ಪ್ರಜಾಪ್ರಭುತ್ವವನ್ನೇ ಅಪಮಾನಿಸುವಂತಿತ್ತು ಎಂದು ವೆಂಕಟೇಶ್ ತಿಳಿಸಿದ್ದಾರೆ
ಕಾಂಗ್ರೆಸ್ ಮುಕ್ತ ಭಾರತ ಮಾಡುವುದಾಗಿ ಹೇಳುವ ಬಿಜೆಪಿಗೆ ಹಿಮಾಚಲ ಪ್ರದೇಶ ಚುನಾವಣೆ ತಕ್ಕ ಉತ್ತರ ನೀಡಿದೆ.
ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಈಗಾಗಲೇ ಜನ ತಿರುಗಿ ಬಿದ್ದಿದ್ದಾರೆ. ಜನಸಂಕಲ್ಪ ಯಾತ್ರೆಯ ನೆಪದಲ್ಲಿ ನೂರಾರು ಕೋಟಿ ರೂಪಾಯಿಗಳ ಯೋಜನೆಗಳನ್ನು ಘೋಷಿಸುತ್ತಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ
ಕರ್ನಾಟಕದಲ್ಲಿ ಬಿಜೆಪಿ ಹಿಂದೆಯೂ ಗೆದ್ದಿಲ್ಲ, ಮುಂದೆಯೂ ಗೆಲ್ಲುವುದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ. ತ್ರಿಕೋನ ಸ್ಪರ್ಧೆ ಇಲ್ಲ.ವಿರೋಧ ಪಕ್ಷದ ನಾಯಕ ರಾಗಿ ಸಿದ್ದರಾಮಯ್ಯ ಅವರು ಪ್ರಜಾತಂತ್ರ ವ್ಯವಸ್ಥೆಯಲ್ಲಿ ತಮಗಿರುವ ಅಪಾರ ಅನುಭವದ ಮೂಲಕ ಸರ್ಕಾರದ ಭ್ರಷ್ಟಾಚಾರವನ್ನು, ದುರಾಡಳಿತವನ್ನು, ವೈಫಲ್ಯಗಳನ್ನು ಜನತೆಗೆ ಜಾಗೃತಿ ಮೂಡಿಸುವುದರಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯನವರ ಟೀಕೆಗಳಿಗೆ ಉತ್ತರ ಕೊಡಲು ಸಾಧ್ಯವಾಗದೇ , ಮುಖ್ಯಮಂತ್ರಿಯಾದಿಯಾಗಿ, ಇಡೀ ಸಚಿವ ಸಂಪುಟವೇ ಸಿದ್ದರಾಮಯ್ಯನವರ ವಿರುದ್ಧ ತಿರುಗಿ ಬಿದ್ದಿದೆ.ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಹಲವು ಕಾರ್ಯಕ್ರಮಗಳ ಮೂಲಕಪಕ್ಷವನ್ನು ಸಂಘಟಿಸಿದ್ದಾರೆ. ಬಿಜೆಪಿಯವರ ಜನಸಂಕಲ್ಪ ಯಾತ್ರೆಖಾಲಿ ಕುರ್ಚಿಗಳಿಗೆ ಭಾಷಣ ಮಾಡಬೇಕಾದ ಅನಿವಾರ್ಯತೆ ಬಿಜೆಪಿಗೆ ಬಂದಿದೆ ಎಂದು ತಿಳಿಸಿದ್ದಾರೆ.